alex Certify
ಕನ್ನಡ ದುನಿಯಾ       Mobile App
       

Kannada Duniya

ಪುಷ್ ಫುಲ್ ಲೋಕಲ್ ಟ್ರೇನ್ ವಿರುದ್ಧ ಪ್ರಯಾಣಿಕರ ಆಕ್ರೋಶ

ಕೋಲಾರ: ಮಾರಿಕುಪ್ಪಂ-ಬೆಂಗಳೂರು ಸ್ವರ್ಣ ಪ್ಯಾಸೆಂಜರ್ ರೈಲು ಬದಲಾವಣೆ ಮಾಡಿ, ಪ್ಯಾಸೆಂಜರ್ ರೈಲಿನ ಬದಲಾಗಿ ಪುಷ್ ಫುಲ್ ಲೋಕಲ್ ರೈಲು ಬಿಡಲಾಗುತ್ತಿರುವುದು ಜಿಲ್ಲೆಯ ಜನರ ಆಕ್ರೋಶಕ್ಕೆ ಕಾರಣವಾಗಿದೆ.

ಕಾಲು ಶತಮಾನಗಳಷ್ಟು ಇತಿಹಾಸವನ್ನು ಹೊಂದಿದ್ದ ಸ್ವರ್ಣ ಪ್ಯಾಸೆಂಜರ್ ರೈಲನ್ನು ಏಕಾಏಕಿ ಬದಲಿಸಲಾಗಿದ್ದು, ಪುಷ್ ಪುಲ್ ರೈಲು ಹಾಕಲಾಗಿದೆ. ರೈಲ್ವೆ ಇಲಾಖೆ ಈ ಕ್ರಮಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕೆಜಿಎಫ್ ಜನತೆ, ಈ ರೈಲನ್ನು ಬದಲಿಸುವಂತೆ ಒತ್ತಾಯಿಸಿದ್ದಾರೆ. ಬದಲಾದ ರೈಲಿನ ಬೋಗಿಗಳು ಕಡಿಮೆ ಇರುವ ಕಾರಣ ಪ್ರತಿನಿತ್ಯ ಬೆಂಗಳೂರಿಗೆ ಪ್ರಯಾಣ ಬೆಳೆಸುವವರಿಗೆ ಬಹಳಷ್ಟು ತೊಂದರೆಯಾಗುತ್ತಿದೆ. ಅಲ್ಲದೇ ಉದ್ಯೋಗಿಗಳು, ವಿದ್ಯಾರ್ಥಿಗಳು, ವ್ಯಾಪಾರಸ್ಥರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಸ್ವರ್ಣ ಪ್ಯಾಸೆಂಜರ್ ರೈಲು ಬದಲಾವಣೆಗೆ ವಿರೋಧಿಸಿ ಈ ಹಿಂದೆ ಮಾರಿಕುಪ್ಪಂ ರೈಲ್ವೆ ನಿಲ್ದಾಣದಲ್ಲಿ ಸಂಸದ ಕೆ.ಎಚ್.ಮುನಿಯಪ್ಪ ಪುತ್ರಿ ರೂಪ ಶಶಿಧರ್ ನೇತೃತ್ವದಲ್ಲಿ ಹಲವು ಸಂಘಟನೆಗಳು ಪ್ರತಿಭಟನೆ ನಡೆಸಿದ್ದರು. ಆದಾಗ್ಯೂ ಗಮನ ಹರಿಸದ ರೈಲ್ವೆ ಇಲಾಖೆ ಪುಷ್ ಪುಲ್ ರೈಲನ್ನೇ ಮುಂದುವರೆಸಿದೆ. ಇದರಿಂದ ಮತ್ತೆ ಸಿಡಿದೆದ್ದಿರುವ ಪ್ರಯಾಣಿಕರು ರೈಲ್ವೆ ಇಲಾಖೆ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...