alex Certify
ಕನ್ನಡ ದುನಿಯಾ       Mobile App
       

Kannada Duniya

ಸರ್ಕಾರಿ ನೌಕರರಿಗೆ ಇಲ್ಲಿದೆ ಶುಭ ಸುದ್ದಿ

ಬೆಂಗಳೂರು: ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಕಾರಣದಿಂದ ರಾಜ್ಯ ಸರ್ಕಾರಿ ನೌಕರರ ವೇತನ ಹೆಚ್ಚಳ ಪ್ರಕ್ರಿಯೆ ವಿಳಂಬವಾಗಿತ್ತು.

ಕೇಂದ್ರ ಚುನಾವಣಾ ಆಯೋಗ ಅನುಮೋದನೆ ನೀಡಿದ ನಂತರದಲ್ಲಿ ನೌಕರರ ವೇತನ ಭತ್ಯೆ, ಪಿಂಚಣಿ ಪರಿಷ್ಕರಿಸಲು ಆದೇಶ ಹೊರಡಿಸಲಾಗಿದೆ.

ಪರಿಷ್ಕೃತ ವೇತನ ಬಾಕಿ ಪಾವತಿಸುವ ಕುರಿತು ಕ್ರಮ ಕೈಗೊಳ್ಲುವಂತೆ ರಾಜ್ಯ ಸರ್ಕಾರಿ ಇಲಾಖೆಗಳ ಪ್ರಧಾನ ಕಾರ್ಯದರ್ಶಿಗಳಿಗೆ ಹಣಕಾಸು ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಸೂಚನೆ ನೀಡಿದ್ದಾರೆ.

ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎನ್.ಎಸ್. ಪ್ರಸಾದ್ ಅವರು, 2018 ರ ಏಪ್ರಿಲ್ ನಂತರದಲ್ಲಿನ ಪರಿಷ್ಕೃತ ವೇತನ ಶ್ರೇಣಿ ನಿಗದಿಪಡಿಸಲಾದ ಪ್ರಕರಣಗಳ ಕುರಿತಾಗಿ ಸೂಚನೆ ನೀಡಿದ್ದಾರೆ. 2018 ರ ಜೂನ್ 30 ರೊಳಗೆ ಸರ್ಕಾರಿ ನೌಕರರ ವೇತನ ನಿಗದಿಪಡಿಸುವಂತೆ ಇಲಾಖೆಗಳ ಮುಖ್ಯಸ್ಥರಿಗೆ ತಿಳಿಸಲಾಗಿದೆ.

ವೇತನ ಆಯೋಗದ ಶಿಫಾರಸಿನಂತೆ ರಾಜ್ಯ ಸರ್ಕಾರ ಸರ್ಕಾರಿ ನೌಕರರ ವೇತನ, ಭತ್ಯೆ, ಪಿಂಚಣಿಯನ್ನು ಪರಿಷ್ಕರಿಸಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...