alex Certify
ಕನ್ನಡ ದುನಿಯಾ       Mobile App
       

Kannada Duniya

ಶುಭ ಸುದ್ದಿ! ಕೇಂದ್ರ ಸರ್ಕಾರಿ ನೌಕರರಿಗೆ ಸಮನಾದ ವೇತನ ಜಾರಿ

ಬೆಂಗಳೂರು: ಹೈಕೋರ್ಟ್ ನೌಕರರಿಗೆ ಕೇಂದ್ರ ಸರ್ಕಾರಿ ನೌಕರರಿಗೆ ಸಮನಾದ ವೇತನ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ಸರ್ಕಾರದ ಪರವಾಗಿ ಹೈಕೋರ್ಟ್ ನಲ್ಲಿ ಅಡ್ವೋಕೇಟ್ ಜನರಲ್ ಮಧುಸೂದನ್ ನಾಯಕ್ ಹೇಳಿಕೆ ನೀಡಿದ್ದಾರೆ.

ಹೈಕೋರ್ಟ್ ನೌಕರರು ಮತ್ತು ಸಿಬ್ಬಂದಿಗೆ ವೇತನ ಪರಿಷ್ಕರಣೆ ಕುರಿತಾಗಿ 14 ವರ್ಷಗಳಿಂದ ಹೋರಾಟ ನಡೆಸಲಾಗಿತ್ತು. ಹಣಕಾಸು ಇಲಾಖೆ ವೇತನ ಪರಿಷ್ಕರಣೆ, ಬಾಕಿ ಬಿಡುಗಡೆಗೆ ಅಗತ್ಯವಾಗಿರುವ ಅನುದಾನ ಒದಗಿಸುವ ಒಪ್ಪಿಗೆ ನೀಡಿರುವುದಾಗಿ ಹೈಕೋರ್ಟ್ ಗೆ ತಿಳಿಸಲಾಗಿದೆ.

ಕರ್ನಾಟಕ ಹೈಕೋರ್ಟ್ ನೌಕರರ ಕಲ್ಯಾಣ ಸಂಘ ಮತ್ತು ನಿಜಗುಣಿ ಎಂ. ಕರಡಿಗುಡ್ಡ ಸಲ್ಲಿಸಿದ ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಣೆ ನ್ಯಾ. ಬಿ.ಎಸ್. ಪಾಟೀಲ್, ನ್ಯಾ. ಬಿ.ವಿ. ನಾಗರತ್ನ ಅವರ ವಿಭಾಗೀಯ ಪೀಠದಲ್ಲಿ ನಡೆದಿದ್ದು, ಈ ವೇಳೆ ಅಡ್ವೋಕೇಟ್ ಜನರಲ್ ಅವರು ಹಣಕಾಸು ಇಲಾಖೆ ಒಪ್ಪಿಗೆ ನೀಡಿರುವುದನ್ನು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...