alex Certify
ಕನ್ನಡ ದುನಿಯಾ       Mobile App
       

Kannada Duniya

ರಾಷ್ಟ್ರಪಕ್ಷಿ ನವಿಲನ್ನು ಬೇಟೆಯಾಡಿದ್ದ ಜನಪ್ರತಿನಿಧಿ ಅರೆಸ್ಟ್

PEACOCK ss

ಶಿವಮೊಗ್ಗ: ಗುಂಡುಹಾರಿಸಿ ರಾಷ್ಟ್ರಪಕ್ಷಿ ನವಿಲು ಹತ್ಯೆ ಮಾಡಿದ್ದ ಆರೋಪದ ಮೇಲೆ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರೊಬ್ಬರನ್ನು ಗ್ರಾಮಸ್ಥರೇ ಹಿಡಿದು ಅರಣ್ಯ ಇಲಾಖೆ ವಶಕ್ಕೆ ಒಪ್ಪಿಸಿದ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ.

ಶಿಕಾರಿಪುರ ತಾಲ್ಲೂಕು ಶಿರಾಳಕೊಪ್ಪ ಸಮೀಪದ ಬಸವನಂದಿ ಗ್ರಾಮದಲ್ಲಿನ ಅರಣ್ಯ ಪ್ರದೇಶದಲ್ಲಿ ನವಿಲು ಹತ್ಯೆ ಮಾಡಿದ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಅಜೀಜ್ ಖಾನ್ ಎಂಬುವವರನ್ನು ಬಂಧಿಸಲಾಗಿದೆ. ಮತ್ತೊಬ್ಬ ಆರೋಪಿ ಶಿರಾಳಕೊಪ್ಪ ಪಟ್ಟಣ ಪಂಚಾಯಿತಿ ನಾಮನಿರ್ದೇಶಿತ ಸದಸ್ಯ ಮುದಾಸಿರ್ ತಲೆ ಮರೆಸಿಕೊಂಡಿದ್ದಾನೆ. ಬಸವನಂದಿ ಗ್ರಾಮದ ಬಳಿ ಅರಣ್ಯದಲ್ಲಿ ಗುಂಡು ಹಾರಿಸಿ ನವಿಲನ್ನು ಹತ್ಯೆ ಮಾಡಿ ಕಾರಿನಲ್ಲಿ ಸಾಗಿಸುವಾಗ ಗ್ರಾಮಸ್ಥರ ಕೈಗೆ ಸಿಕ್ಕಿಬಿದ್ದಿದ್ದಾರೆ ಎನ್ನಲಾಗಿದೆ.

ಗ್ರಾಮಸ್ಥರೊಬ್ಬರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು, ತಕ್ಷಣ ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಮೃತ ನವಿಲು, ಬಂದೂಕು ಹಾಗೂ ವಾಹನ ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿದ್ದಾರೆ. ಮುದಾಸಿರ್ ಪತ್ತೆಗೆ ಬಲೆ ಬೀಸಲಾಗಿದೆ ಎಂದು ತಿಳಿದುಬಂದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...