alex Certify
ಕನ್ನಡ ದುನಿಯಾ       Mobile App
       

Kannada Duniya

ಗಂಗಾ ಶುದ್ಧೀಕರಣ ವಿಳಂಬಕ್ಕೆ ಪೇಜಾವರ ಶ್ರೀಗಳ ಬೇಸರ

ಕೇಂದ್ರ ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆ ಗಂಗಾ ಶುದ್ಧೀಕರಣದ ಕೆಲಸ ವಿಳಂಬವಾಗುತ್ತಿರುವ ಕುರಿತು ಉಡುಪಿ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಬೇಸರ ವ್ಯಕ್ತಪಡಿಸಿದ್ದಾರೆ.

ದಾವಣಗೆರೆಯ ರಾಘವೇಂದ್ರ ಮಠಕ್ಕೆ ಸೋಮವಾರದಂದು ಭೇಟಿ ನೀಡಿದ್ದ ಪೇಜಾವರ ಶ್ರೀಗಳು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಈ ಕಾರ್ಯ ಇಷ್ಟರೊಳಗಾಗಿ ಪೂರ್ಣಗೊಳ್ಳಬೇಕಿತ್ತು. ಆದರೆ ಇನ್ನೂ ಆಗಿಲ್ಲ ಎಂದು ಹೇಳಿದರು.

ಈ ಕುರಿತು ಕೇಂದ್ರ ಸರ್ಕಾರದ ಗಮನ ಸೆಳೆಯಲಾಗುವುದು ಎಂದು ಹೇಳಿದ ಶ್ರೀಗಳು, ರಾಮ ಮಂದಿರ ನಿರ್ಮಾಣ ಕುರಿತಂತೆ ಪ್ರತಿಕ್ರಿಯಿಸಿ, ಇದಕ್ಕೆ ಅನೇಕ ತೊಡಕುಗಳಿವೆ. ಜೊತೆಗೆ ಸುಪ್ರೀಂ ಕೋರ್ಟ್ ತೀರ್ಪು ಸಹ ಹೊರ ಬೀಳಬೇಕಿರುವ ಕಾರಣ ಅಲ್ಲಿಯವರೆಗೂ ಸಾಧ್ಯವಾಗುವುದಿಲ್ಲವೆಂದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...