alex Certify
ಕನ್ನಡ ದುನಿಯಾ       Mobile App
       

Kannada Duniya

ಶೀರೂರು ಶ್ರೀಗಳ ಅಂತಿಮ ಕಾರ್ಯದಲ್ಲಿ ಭಾಗವಹಿಸುವುದಿಲ್ಲ: ಪೇಜಾವರ ಶ್ರೀ

ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಇಂದು ವಿಧಿವಶರಾದ ಶೀರೂರು ಮಠದ ಲಕ್ಷ್ಮೀವರ ತೀರ್ಥ ಶ್ರೀಗಳ ಸಾವಿನ ಕುರಿತಂತೆ ಪ್ರತಿಕ್ರಿಯೆ ವ್ಯಕ್ತಪಡಿಸಿರುವ ಪೇಜಾವರ ಶ್ರೀಗಳು, ಲಕ್ಷ್ಮೀವರತೀರ್ಥರಿಗೆ ವಿಷ ಪ್ರಾಶನವಾಗಿರುವ ಪ್ರಮೇಯವೇ ಇಲ್ಲ ಎಂದು ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಪೇಜಾವರ ಶ್ರೀಗಳು, ಅವರ ಸಹೋದರರೇ ಆಹಾರ ದೋಷದಿಂದಾಗಿ ಸಾವು ಸಂಭವಿಸಿದೆ ಎಂದು ಹೇಳಿದ್ದಾರೆ. ಲಕ್ಷ್ಮೀವರ ತೀರ್ಥರಿಗೆ ಯಾರು ವಿಷ ಪ್ರಾಶನ ಮಾಡಿಸುತ್ತಾರೆ ಎಂದಿದ್ದಾರೆ.

ಲಕ್ಷ್ಮೀವರ ತೀರ್ಥರ ಅಂತಿಮ ಕಾರ್ಯ ಇಂದು ನಡೆಯಲಿರುವ ಹಿನ್ನೆಲೆಯಲ್ಲಿ ತಾವು ಇದರಲ್ಲಿ ಪಾಲ್ಗೊಳ್ಳುವುದಿಲ್ಲ. ಇಲ್ಲಿಂದಲೇ ಅವರ ಆತ್ಮಕ್ಕೆ ಶಾಂತಿ ಕೋರುವುದಾಗಿ ಪೇಜಾವರ ಶ್ರೀಗಳು ತಿಳಿಸಿದ್ದಾರೆ. ಅಂತಿಮ ವಿಧಿ ವಿಧಾನಕ್ಕೆ ಹೋಗಲೇಬೇಕೆಂಬ ನಿಯಮವೇನಿಲ್ಲ. ಒಂದು ವೇಳೆ ಆಹ್ವಾನ ಬಂದರೆ ನೋಡೋಣ ಎಂದು ಪೇಜಾವರ ಶ್ರೀಗಳು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...