alex Certify
ಕನ್ನಡ ದುನಿಯಾ       Mobile App
       

Kannada Duniya

ಬಿಜೆಪಿ ಸಭೆಗೆ ಹಾಜರಾದ ಶಾಸಕ ಪ್ರೀತಂ ಗೌಡ ಹೇಳಿದ್ದೇನು?

ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಜೆಡಿಎಸ್ ಜೊತೆ ಗುರುತಿಸಿಕೊಂಡಿದ್ದಾರೆಂದು ಮಾಧ್ಯಮಗಳಲ್ಲಿ ವರದಿಯಾಗಿದ್ದ ಕುರಿತು ಹಾಸನ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಪ್ರೀತಂ ಗೌಡ ಸ್ಪಷ್ಟನೆ ನೀಡಿದ್ದಾರಲ್ಲದೇ, ಬೆಂಗಳೂರಿನಲ್ಲಿ ಇಂದು ನಡೆದ ಬಿಜೆಪಿ ಸಭೆಯಲ್ಲಿ ಪಾಲ್ಗೊಂಡಿದ್ದಾರೆ.

ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ತಾವು ಯಾವುದೇ ಕಾರಣಕ್ಕೂ ಬಿಜೆಪಿ ತೊರೆಯುವುದಿಲ್ಲ. ಸಾಮಾನ್ಯ ಕಾರ್ಯಕರ್ತನಾಗಿದ್ದ ನಾನು ಇಂದು ಶಾಸಕನಾಗಿ ಆಯ್ಕೆಯಾಗಲು ಬಿಜೆಪಿ ಕಾರಣವಾಗಿದೆ. ತಾವು ಜೆಡಿಎಸ್ ಪಾಳೆಯ ಸೇರಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿರುವುದರಲ್ಲಿ ಯಾವುದೇ ಹುರುಳಿಲ್ಲವೆಂದಿದ್ದಾರೆ.

ಪಕ್ಷದ ನಾಯಕ, ರೈತ ಪರ ಹೋರಾಟಗಾರರಾದ ಯಡಿಯೂರಪ್ಪರನ್ನು ಬೆಂಬಲಿಸುವಂತೆ ತಾವು ಕೆಲ ವಿಪಕ್ಷ ಶಾಸಕರನ್ನು ಸಂಪರ್ಕಿಸಿದ್ದೇನೆ ಹೊರತು ಬಿಜೆಪಿ ತೊರೆಯುವ ಪ್ರಶ್ನೆಯೇ ಇಲ್ಲ. ಯಡಿಯೂರಪ್ಪನವರೇ ನಮ್ಮ ನಾಯಕರಾಗಿದ್ದು, ಅವರು ಬಹುಮತ ಸಾಬೀತುಪಡಿಸುವುದು ಖಚಿತ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...