alex Certify
ಕನ್ನಡ ದುನಿಯಾ       Mobile App
       

Kannada Duniya

ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯ

ವಿಜಯಪುರ: ಜಗಳದಲ್ಲಿ ಆರಂಭವಾದ ಪರಸ್ಪರ ವಾಗ್ವಾದ ಕೊಲೆಯಲ್ಲಿ ಅಂತ್ಯವಾದ ಘಟನೆ ಮುದ್ದೇಬಿಹಾಳ ತಾಲೂಕಿನ ಗಡಿ ಸೋಮನಾಳ ಗ್ರಾಮದಲ್ಲಿ ನಡೆದಿದೆ.

ಸೋಮನಾಳ ಗ್ರಾಮದ ಗೋಲ್ಲಾಳಪ್ಪ ಸಂಗಣ್ಣ ಹಡಪದ (28) ಕೊಲೆಯಾದ ವ್ಯಕ್ತಿ. ಅದೇ ಗ್ರಾಮದ ಶಿವಪುತ್ರಪ್ಪ ಮೈಲಾರಪ್ಪ ಮದ್ದರಕಿ ಹಾಗೂ ಗೊಲ್ಲಾಳಪ್ಪ ನಡುವೆ ಕ್ಷುಲ್ಲಕ ಕಾರಣಕ್ಕಾಗಿ ಮಾತಿಗೆ ಮಾತು ಬೆಳೆದಿದೆ. ಇದರಿಂದ ಕೋಪಗೊಂಡಿದ್ದ ಶಿವಪುತ್ರಪ್ಪ ಕಂಠಪೂರ್ತಿ ಕುಡಿದು, ಮಧ್ಯರಾತ್ರಿ ಮನೆಯ ಹೊರಗಡೆ ಕಟ್ಟೆಯ ಮೇಲೆ ಮಲಗಿದ್ದ ಗೊಲ್ಲಾಳಪ್ಪನನ್ನು ಕೊಡಲಿಯಿಂದ ಕಡಿದು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾನೆ.

ತಾಳಿಕೋಟೆ ಸಬ್ ಇನ್ಸ್ ಪೆಕ್ಟರ್ ಜಿ.ಎಸ್. ಬಿರಾದಾರ ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ತನಿಖೆ ಕೈಗೊಂಡಿದ್ದಾರೆ. ಆರೋಪಿಗಾಗಿ ವ್ಯಾಪಕ ಶೋಧ ನಡೆಸಲಾಗಿದೆ. ಆರೋಪಿ ಶಿವಪುತ್ರಪ್ಪ ಈ ಹಿಂದೆ ತನ್ನ ಹೆಂಡತಿಯನ್ನೇ ಕೊಲೆ ಮಾಡಿ, ಶಿಕ್ಷೆ ಅನುಭವಿಸಿ ಬಿಡುಗಡೆಯಾಗಿದ್ದ ಎಂದು ತಿಳಿದುಬಂದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...