alex Certify
ಕನ್ನಡ ದುನಿಯಾ       Mobile App
       

Kannada Duniya

ಪೆಟ್ರೋಲ್ ಬಂಕ್ ನಲ್ಲಿ ನಡೀತು ಆಘಾತಕಾರಿ ಘಟನೆ

knife kl

ಬೀದರ್: ಪೆಟ್ರೋಲ್ ಬಂಕ್ ನಲ್ಲಿ ಪೆಟ್ರೋಲ್ ಹಾಕಿಸಿಕೊಂಡ ಬೈಕ್ ಸವಾರನೊಬ್ಬ, ಹಣ ಕೇಳಿದ ಸಿಬ್ಬಂದಿ ಮೇಲೆಯೇ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಬೀದರ್ ನ ನ್ಯೂ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

 

ನಿನ್ನೆ ರಾತ್ರಿ ಪೆಟ್ರೋಲ್ ಬಂಕ್ ಗೆ ಬಂದ ದುಷ್ಕರ್ಮಿ, ಸಿಬ್ಬಂದಿಯನ್ನು ಕರೆದು ಬೈಕ್ ಗೆ ಪೆಟ್ರೋಲ್ ಹಾಕಿಸಿಕೊಂಡಿದ್ದು, ಹಣ ಕೇಳಿದಾಗ, ಹಲ್ಲೆ ಮಾಡಿದ್ದಾನೆ. ಆಗ ಬಂಕ್ ಸಿಬ್ಬಂದಿ ಹಣ ಕೊಡುವಂತೆ ಮನವಿ ಮಾಡಿದರೂ, ಕೇಳದೇ, ತನ್ನ ಬಳಿ ಇದ್ದ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ. ತೀವ್ರವಾಗಿ ಗಾಯಗೊಂಡಿರುವ ಪೆಟ್ರೋಲ್ ಬಂಕ್ ನ ಇಬ್ಬರು ನೌಕರರನ್ನು ಬೀದರ್ ಆಸ್ಪತ್ರೆಗೆ ಸೇರಿಸಲಾಗಿದೆ. ಅವರಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದ್ದು, ಹೈದರಾಬಾದ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

 

ಬೀದರ್ ಬಿ.ಜೆ.ಪಿ. ಮುಖಂಡರೊಬ್ಬರಿಗೆ ಸೇರಿದ ಪೆಟ್ರೋಲ್ ಬಂಕ್ ಇದಾಗಿದ್ದು, ಸ್ಥಳಕ್ಕೆ ಭೇಟಿ ನೀಡಿದ ನ್ಯೂ ಟೌನ್ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ದುಷ್ಕರ್ಮಿ ಪತ್ತೆಗೆ ಬಲೆ ಬೀಸಿದ್ದಾರೆ. ಪೆಟ್ರೋಲ್ ಹಾಕಿಸಿಕೊಂಡ ಹಣ ಕೇಳಿದ್ದಕ್ಕೆ ಚಾಕುವಿನಿಂದ ಪೆಟ್ರೋಲ್ ಬಂಕ್ ಸಿಬ್ಬಂದಿಗೆ ಇರಿದಿದ್ದಾನೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...