alex Certify
ಕನ್ನಡ ದುನಿಯಾ       Mobile App
       

Kannada Duniya

ಭಾರತ್ ಬಂದ್ ಎಫೆಕ್ಟ್: ಮೆಜೆಸ್ಟಿಕ್ ನಲ್ಲಿ ಪ್ರಯಾಣಿಕರ ಪರದಾಟ

ತೈಲ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಇಂದು ಕರೆ ನೀಡಿರುವ ‘ಭಾರತ್ ಬಂದ್’ ಗೆ ರಾಜ್ಯದಲ್ಲಿ ವ್ಯಾಪಕ ಬೆಂಬಲ ವ್ಯಕ್ತವಾಗಿದ್ದು, ಬೆಳಿಗ್ಗೆ 6 ಗಂಟೆಯಿಂದಲೇ ಬಸ್ ಸಂಚಾರ ಸ್ಥಗಿತಗೊಂಡಿರುವ ಪರಿಣಾಮ ರಸ್ತೆಗಳು ಬಿಕೋ ಎನ್ನುತ್ತಿವೆ.

ಇಂದಿನ ಭಾರತ್ ಬಂದ್ ಎಫೆಕ್ಟ್, ಬೆಂಗಳೂರಿನ ಮೆಜೆಸ್ಟಿಕ್ ನಲ್ಲಿ ಪ್ರಯಾಣಿಕರ ಮೇಲೆ ಹೆಚ್ಚಿನ ಪರಿಣಾಮ ಬೀರಿದ್ದು, ಕಳೆದ ರಾತ್ರಿ ಪ್ರಯಾಣಿಸಿ ಇಂದು ಬೆಳಗ್ಗೆ ಬೆಂಗಳೂರಿನ ಮೆಜೆಸ್ಟಿಕ್ ಹಾಗೂ ರೈಲು ನಿಲ್ದಾಣದಲ್ಲಿ ಬಂದಿಳಿದ ಪ್ರಯಾಣಿಕರು ಮುಂದೆ ಪ್ರಯಾಣಿಸಲು ಬಸ್ ಅಥವಾ ಟ್ಯಾಕ್ಸಿ ಸಂಚಾರವಿಲ್ಲದ ಕಾರಣ ಪರದಾಡುತ್ತಿದ್ದಾರೆ.

ಬಂದ್ ಹಿನ್ನಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ವ್ಯಾಪಕ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಲಾಗಿದೆ. ಹಲವು ಜಿಲ್ಲೆಗಳಲ್ಲಿ ಪ್ರತಿಭಟನಾಕಾರರು ಮೆರವಣಿಗೆ ನಡೆಸಿ ತೈಲ ಬೆಲೆ ಏರಿಕೆ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...