alex Certify
ಕನ್ನಡ ದುನಿಯಾ       Mobile App
       

Kannada Duniya

ವಾಹನ ಸವಾರರಿಗೆ ಮತ್ತೊಂದು ಶಾಕ್ !

Petrolpump-kvtC--621x414@LiveMint

ಪೆಟ್ರೋಲ್ ಮತ್ತು ಡಿಸೇಲ್ ಮೇಲಿನ ಮಾರಾಟ ತೆರಿಗೆಯನ್ನು ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ, ಬಜೆಟ್ ನಲ್ಲಿ ಹೆಚ್ಚಳ ಮಾಡಿರುವ ಬೆನ್ನಲ್ಲಿಯೇ ಶುಕ್ರವಾರದಿಂದ ಪೆಟ್ರೋಲ್ ಮತ್ತು ಡಿಸೇಲ್ ಬೆಲೆಯಲ್ಲಿ ಏರಿಕೆ ಕಾಣಲಿದ್ದು, ರಾಜ್ಯದ ವಾಹನ ಸವಾರರ ಮೇಲೆ ಮತ್ತಷ್ಟು ಹೊರೆ ಬೀಳಲಿದೆ.

ಹೌದು. ವಿವಿಧ ಮೂಲಗಳಿಂದ ರಾಜ್ಯದ ಆದಾಯ 877 ಕೋಟಿ ರೂ. ಕೊರತೆಯಾಗಿದ್ದು, ಅದನ್ನು ಸರಿದೂಗಿಸಲು ಇಂಧನಗಳಿಗೆ ಮಾರಾಟ ತೆರಿಗೆ ವಿಧಿಸಿರುವುದಾಗಿ 2016- 17 ನೇ ಸಾಲಿನ ಬಜೆಟ್ ಮಂಡಿಸುವ ಸಮಯದಲ್ಲಿ ಸಿದ್ದರಾಮಯ್ಯ ಹೇಳಿದ್ದರು. ಅದರಂತೆ ಪ್ರತಿ ಲೀಟರ್ ಪೆಟ್ರೋಲ್ ಗೆ 1.89 ಪೈಸೆ ಹಾಗೂ ಡಿಸೇಲ್ ಗೆ 89 ಪೈಸೆ ಮಾರಾಟ ತೆರಿಗೆ ವಿಧಿಸಿ ಸರ್ಕಾರ ಆದೇಶ ಹೊರಡಿಸಿದ್ದು, ಏಪ್ರಿಲ್ 1 ರಿಂದ ಜಾರಿಗೆ ಬರಲಿದೆ.

ಒಟ್ಟಾರೆ ಹಲವು ದಿನಗಳಿಂದ ಪೆಟ್ರೋಲ್ ಹಾಗೂ ಡಿಸೇಲ್ ದರ ಇಳಿಕೆಯ ಕನಸು ಕಾಣುತ್ತಿದ್ದ ವಾಹನ ಸವಾರರಿಗೆ ಮತ್ತೆ ಈ ಬೆಲೆ ಏರಿಕೆಯ ಬಿಸಿ ತಟ್ಟಿದ್ದು, ಮಾತ್ರವಲ್ಲ, ಕೆ ಎಸ್ ಆರ್ ಟಿ ಸಿ ಪ್ರಯಾಣ ದರವೂ ಹೆಚ್ಚಳವಾಗುವ ಸಾಧ್ಯತೆ ದಟ್ಟವಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...