alex Certify
ಕನ್ನಡ ದುನಿಯಾ       Mobile App
       

Kannada Duniya

ಬೆಂಗಳೂರು ವಾಹನ ಸವಾರರಿಗೆ ಶಾಕ್

petro beng

ಬೆಂಗಳೂರು: ಬೆಂಗಳೂರಿನ ಪೆಟ್ರೋಲ್ ಬಂಕ್ ಗಳಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಸಿಗದೇ ಸಾರ್ವಜನಿಕರು ಪರದಾಡುವಂತಾಗಿದೆ. ನಗರದಲ್ಲಿ ಸುಮಾರು 400ಕ್ಕೂ ಅಧಿಕ ಬಂಕ್ ಗಳಿದ್ದು, ಅವುಗಳಲ್ಲಿ 300ಕ್ಕೂ ಅಧಿಕ ಬಂಕ್ ಗಳಲ್ಲಿ ಪೆಟ್ರೋಲ್, ಡೀಸೆಲ್ ಇಲ್ಲದಂತಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ದೇವನಗೊಂದಿ ಟರ್ಮಿನಲ್ ನಲ್ಲಿ ಸಿಬ್ಬಂದಿ ಮುಷ್ಕರ್ ಕೈಗೊಂಡಿದ್ದಾರೆ. ಇಲ್ಲಿಂದಲೇ ಬೆಂಗಳೂರಿಗೆ ಸುಮಾರು ಟ್ಯಾಂಕರ್ ಗಳಲ್ಲಿ ಪೆಟ್ರೋಲ್, ಡೀಸೆಲ್ ಪೂರೈಕೆಯಾಗುತ್ತಿದ್ದು, ಸಿಬ್ಬಂದಿ ಮೂಲ ಸೌಕರ್ಯಕ್ಕೆ ಒತ್ತಾಯಿಸಿ ಮುಷ್ಕರ ಕೈಗೊಂಡಿರುವುದರಿಂದ ತೈಲ ಪೂರೈಕೆಯಾಗಿಲ್ಲ. ಬೆಂಗಳೂರಿಗೆ ದಿನಕ್ಕೆ ಸುಮಾರು 20 ಲಕ್ಷ ಲೀಟರ್ ಪೆಟ್ರೋಲ್ ಬೇಕಿದ್ದು, ಎರಡು ದಿನಗಳಿಂದ ಪೂರೈಕೆ ಯಾಗಿಲ್ಲ.

ಇದರಿಂದಾಗಿ ಬಂಕ್ ಗಳಲ್ಲಿ ನೋ ಸ್ಟಾಕ್ ಬೋರ್ಡ್ ಹಾಕಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ಟ್ಯಾಂಕರ್ ಸಿಬ್ಬಂದಿಯ ಮುಷ್ಕರದಿಂದಾಗಿ ಪೆಟ್ರೋಲ್ ಅಭಾವ ಸೃಷ್ಠಿಯಾಗಿದ್ದು, ವಾಹನ ಸವಾರರಿಗೆ ದಿಕ್ಕು ತೋಚದಂತಾಗಿದೆ. ಮುಷ್ಕರ ನಡೆಯುತ್ತಿರುವುದರಿಂದ ಪೂರೈಕೆಯಲ್ಲಿ ವಿಳಂಬವಾಗಿದೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...