alex Certify
ಕನ್ನಡ ದುನಿಯಾ       Mobile App
       

Kannada Duniya

ಗುಡ್ ನ್ಯೂಸ್: ಪಿ.ಹೆಚ್.ಡಿ. ವಿದ್ಯಾರ್ಥಿಗಳಿಗೆ 3000 ರೂ. ಶಿಷ್ಯ ವೇತನ

ಬೆಂಗಳೂರು: ಪಿ.ಹೆಚ್.ಡಿ. ಸಂಶೋಧನಾ ವಿದ್ಯಾರ್ಥಿಗಳಿಗೆ ಮಾಸಿಕ 3000 ರೂ. ಶಿಷ್ಯ ವೇತನ ನೀಡಲು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಯೋಜನೆ ರೂಪಿಸಿದೆ.

ವಿಜ್ಞಾನ ಮತ್ತು ತಂತ್ರಜ್ಞಾನ ಖಾತೆ ಸಚಿವ ಎಂ.ಆರ್. ಸೀತಾರಾಂ ಈ ಕುರಿತು ಮಾಹಿತಿ ನೀಡಿದ್ದು, ವಿಜ್ಞಾನ ಮತ್ತು ಇಂಜಿನಿಯರಿಂಗ್ ವಿಭಾಗದ ಪಿ.ಹೆಚ್.ಡಿ. ವಿದ್ಯಾರ್ಥಿಗಳಿಗೆ ಮಾಸಿಕ 3000 ರೂ. ನಂತೆ 10 ತಿಂಗಳು ಶಿಷ್ಯವೇತನ ನೀಡಲಾಗುವುದು ಎಂದು ತಿಳಿಸಿದ್ದಾರೆ.

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಸಂಶೋಧನೆ ನಡೆಸುವ 1000 ವಿದ್ಯಾರ್ಥಿಗಳಿಗೆ ಮಾಸಿಕ ಶಿಷ್ಯವೇತನ ನೀಡಲಿದ್ದು, ವಾರ್ಷಿಕ 3 ಕೋಟಿ ರೂ. ಅನುದಾನ ಒದಗಿಸಲಾಗುವುದು ಎಂದು ಹೇಳಿದ್ದಾರೆ. ವಿಜ್ಞಾನದ ಬಗ್ಗೆ ಅರಿವು ಮೂಡಿಸಲು ಇಲಾಖೆಯಿಂದ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಇದರ ಭಾಗವಾಗಿ ಪ್ರತಿವರ್ಷ 1200 ಪ್ರೌಢಶಾಲೆ ಶಿಕ್ಷಕರಿಗೆ ತರಬೇತಿ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...