alex Certify
ಕನ್ನಡ ದುನಿಯಾ       Mobile App
       

Kannada Duniya

ಸರ್ಕಾರಿ ಸಭೆ-ಸಮಾರಂಭಗಳಲ್ಲಿ ಬಳಸುವಂತಿಲ್ಲ ಪ್ಲಾಸ್ಟಿಕ್ ಬಾಟಲಿ…!

ಪರಿಸರಕ್ಕೆ ಹಾನಿಯನ್ನುಂಟು ಮಾಡುವ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಲಾಗಿದ್ದರೂ ಸಮರ್ಪಕವಾಗಿ ಅನುಷ್ಟಾನಕ್ಕೆ ಬಾರದ ಕಾರಣ ಈಗ ಸರ್ಕಾರ ಸ್ವಯಂ ನಿಯಂತ್ರಣಕ್ಕೆ ಮುಂದಾಗಿದ್ದು, ಸರ್ಕಾರಿ ಕಚೇರಿಗಳಲ್ಲಿ ಹಾಗೂ ಸಭೆ-ಸಮಾರಂಭಗಳಲ್ಲಿ ನೀರು ಕುಡಿಯಲು ಪ್ಲಾಸ್ಟಿಕ್ ಬಾಟಲಿ ಬಳಸದಂತೆ ಆದೇಶ ಹೊರಡಿಸಲು ಮುಂದಾಗಿದೆ.

ಈ ಕುರಿತು ಪರಿಸರ ಇಲಾಖೆ ಸಲ್ಲಿಸಿದ್ದ ಪ್ರಸ್ತಾವನೆಗೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರು ಅನುಮೋದನೆ ನೀಡಿದ್ದಾರೆಂದು ಹೇಳಲಾಗಿದ್ದು, ಶೀಘ್ರದಲ್ಲೇ ಅಧಿಕೃತ ಪ್ರಕಟಣೆ ಹೊರಬೀಳುವ ನಿರೀಕ್ಷೆಯಿದೆ.

ದೊಡ್ಡ ಕ್ಯಾನ್ ಗಳಲ್ಲಿ ನೀರು ತಂದಿಟ್ಟುಕೊಂಡು ಅದನ್ನು ಪೇಪರ್ ಲೋಟ, ಗ್ಲಾಸ್ ಅಥವಾ ಸ್ಟೀಲ್ ಲೋಟಗಳಲ್ಲಿ ಪೂರೈಸುವಂತೆ ಸೂಚಿಸಲಾಗುತ್ತದೆ. ಅಲ್ಲದೆ ಸರ್ಕಾರಿ ಕಚೇರಿಗಳಲ್ಲಿ ಶುದ್ಧ ನೀರಿನ ಘಟಕವನ್ನು ಸ್ಥಾಪಿಸಲು ವ್ಯವಸ್ಥೆ ಮಾಡಲಾಗುತ್ತದೆ ಎಂದು ತಿಳಿದು ಬಂದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...