alex Certify
ಕನ್ನಡ ದುನಿಯಾ       Mobile App
       

Kannada Duniya

ಸಂಕಲ್ಪಯಾತ್ರೆ: ವಿಡಿಯೋ ಕಾನ್ಪರೆನ್ಸ್ ನಲ್ಲಿ ಮೋದಿ ಮಾತು

ಬೆಳಗಾವಿ: ಬೆಳಗಾವಿ ಜಿಲ್ಲೆ ರಾಯಭಾಗ ತಾಲ್ಲೂಕಿನ ಮುಗಳಖೋಡದಲ್ಲಿ ಸಿದ್ಧರಾಮೇಶ್ವರ ಸಂಕಲ್ಪಯಾತ್ರೆಯನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದ್ದಾರೆ.

ದೆಹಲಿಯಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದ ಅವರು, ಜಾತಿವಾದ, ಮೂಢನಂಬಿಕೆಗಳ ವಿರುದ್ಧ ಹೋರಾಟ ನಡೆಸಬೇಕಿದೆ ಎಂದು ಕರೆ ನೀಡಿದ್ದಾರೆ.

ಸಮಾಜ ವಿರೋಧಿ ಶಕ್ತಿಗಳು ದೇಶವನ್ನು, ಸಮಾಜವನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ. ಇದರ ವಿರುದ್ಧ ಯುವಕರು ಹೋರಾಟ ನಡೆಸಬೇಕಿದೆ. ಸ್ವಾಮಿ ವಿವೇಕಾನಂದರ ಆದರ್ಶ, ತತ್ವ, ಸಿದ್ಧಾಂತಗಳನ್ನು ಮೈಗೂಡಿಸಿಕೊಳ್ಳಬೇಕಿದೆ ಎಂದು ಹೇಳಿದ್ದಾರೆ.

ಸ್ವಾಮಿ ವಿವೇಕಾನಂದರ ಆದರ್ಶವನ್ನು ಮೈಗೂಡಿಸಿಕೊಂಡು ಸಮಾಜವನ್ನು ಒಡೆಯುವವರಿಗೆ ಉತ್ತರ ನೀಡಬೇಕಿದೆ. ಮುಗಳಖೋಡದ ಶ್ರೀಗಳು ಸಮಾಜಮುಖಿ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಗುಜರಾತ್ ಫಲಿತಾಂಶ ಕರ್ನಾಟಕ ವಿಧಾನಸಭಾ ಚುನಾವಣೆ ಮೇಲೆ ಪರಿಣಾಮ ಬೀರಲಿದೆಯೇ...?

    View Results

    Loading ... Loading ...