alex Certify
ಕನ್ನಡ ದುನಿಯಾ       Mobile App
       

Kannada Duniya

ದಾವಣಗೆರೆ ದುಗ್ಗಮ್ಮನ ಜಾತ್ರೆಗೆ ಮೋದಿ

ಗುಜರಾತ್ ಚುನಾವಣೆಯಲ್ಲಿ ಬಿ.ಜೆ.ಪಿ. ಗೆಲುವಿಗೆ ಕಾರಣವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಕೈಗೊಂಡಿದ್ದ ಬಿರುಗಾಳಿ ಪ್ರವಾಸ. ಇದೇ ಮಾದರಿಯನ್ನು ರಾಜ್ಯದಲ್ಲಿ ಅನುಸರಿಸಲು ಬಿ.ಜೆ.ಪಿ. ವರಿಷ್ಠರು ಮುಂದಾಗಿದ್ದಾರೆ. ರಾಜ್ಯದ 28 ಜಿಲ್ಲೆಗಳಲ್ಲಿ ಪ್ರಧಾನಿ ಮೋದಿ ಪ್ರಚಾರ ನಡೆಸಲಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಬಿ.ಜೆ.ಪಿ. ಪರಿವರ್ತನಾ ಯಾತ್ರೆ ಸಮಾರೋಪ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಮೋದಿ, ಕಾರ್ಯಕರ್ತರಲ್ಲಿ ಸಂಚಲನ ಮೂಡಿಸಿದ್ದು, ರಾಜ್ಯದ ವಿವಿಧ ಭಾಗಗಳಲ್ಲಿಯೂ ಮೋದಿ ರ್ಯಾಲಿ ನಡೆಸಲು ಪಕ್ಷದ ನಾಯಕರು ಯೋಜಿಸಿದ್ದಾರೆ.

ಇದೇ ಫೆಬ್ರವರಿ 27 ರಿಂದ ದಾವಣಗೆರೆಯಲ್ಲಿ ನಗರ ದೇವತೆ ದುಗ್ಗಮ್ಮನ ಜಾತ್ರೆ ನಡೆಯಲಿದೆ. ಫೆಬ್ರವರಿ 27 ರಂದು ದಾವಣಗೆರೆಯಲ್ಲಿ ಬಿ.ಜೆ.ಪಿ.ಯಿಂದ ರೈತರ ಸಮಾವೇಶ ಹಮ್ಮಿಕೊಂಡಿದ್ದು, ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆ.

ಪಕ್ಷದ ರಾಜ್ಯ ಚುನಾವಣಾ ಉಸ್ತುವಾರಿ ಹಾಗೂ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಈ ಕುರಿತು ಮಾಹಿತಿ ನೀಡಿದ್ದಾರೆ. ಚುನಾವಣೆ ಸಮೀಪಿಸುತ್ತಿರುವಂತೆಯೇ ಅವರು ರಾಜ್ಯದಲ್ಲಿ ಬಿರುಗಾಳಿ ಪ್ರಚಾರ ನಡೆಸಲಿದ್ದಾರೆ.  ಸಿ.ಎಂ. ತವರು ಜಿಲ್ಲೆ ಮೈಸೂರಿನಲ್ಲಿ ನಡೆಯುವ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.

Subscribe Newsletter

Get latest updates on your inbox...

Opinion Poll

  • ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿರುವ ಬಜೆಟ್ ಚುನಾವಣಾ ಗಿಮಿಕ್...?

    View Results

    Loading ... Loading ...