alex Certify
ಕನ್ನಡ ದುನಿಯಾ       Mobile App
       

Kannada Duniya

ದಕ್ಷಿಣದತ್ತ ಮೋದಿ ಚಿತ್ತ: ಸಂಸದರೊಂದಿಗೆ ಸಭೆ

bjp-sabe

ನವದೆಹಲಿ: ಉತ್ತರ ಪ್ರದೇಶದ ಬಳಿಕ ದಕ್ಷಿಣದತ್ತ ದೃಷ್ಟಿ ಹರಿಸಿರುವ ಪ್ರಧಾನಿ ನರೇಂದ್ರ ಮೋದಿ, ಬಿ.ಜೆ.ಪಿ. ಅಧ್ಯಕ್ಷ ಅಮಿತ್ ಶಾ ಇಂದು ದೆಹಲಿಯಲ್ಲಿ ದಕ್ಷಿಣ ಭಾರತದ ಸಂಸದರೊಂದಿಗೆ ಸಭೆ ನಡೆಸಲಿದ್ದಾರೆ.

ಪ್ರಧಾನಿ ನಿವಾಸದಲ್ಲಿ ನಡೆಯಲಿರುವ ಸಭೆಯಲ್ಲಿ ಕರ್ನಾಟಕದ ಬಿ.ಜೆ.ಪಿ. ಸಂಸದರೊಂದಿಗೆ, ತಮಿಳುನಾಡು, ಕೇರಳ, ತೆಲಂಗಾಣ, ಆಂಧ್ರಪ್ರದೇಶಗಳ ಸಂಸದರು, ಪ್ರಮುಖರು ಭಾಗವಹಿಸಲಿದ್ದಾರೆ.

ಸಂಸದರಾದ ಬಿ.ಎಸ್. ಯಡಿಯೂರಪ್ಪ, ಶೋಭಾ ಕರಂದ್ಲಾಜೆ, ಬಿ. ಶ್ರೀರಾಮುಲು ಅವರು ಉಪ ಚುನಾವಣೆ ಪ್ರಚಾರದಲ್ಲಿ ತೊಡಗಿರುವುದರಿಂದ ಸಭೆಯಲ್ಲಿ ಬಾಗವಹಿಸುತ್ತಿಲ್ಲ.

ಕೇಂದ್ರ ಸಚಿವರಾದ ಡಿ.ವಿ. ಸದಾನಂದ ಗೌಡ, ಅನಂತ್ ಕುಮಾರ್, ರಮೇಶ್ ಜಿಗಜಿಣಗಿ ಮೊದಲಾದವರು ಪಾಲ್ಗೊಳ್ಳಲಿದ್ದಾರೆ. ಕೇಂದ್ರ ಅನುದಾನ ಬಳಕೆ, ಪಕ್ಷದ ಸಂಘಟನೆ, ಮುಂದಿನ ವಿಧಾನಸಭೆ ಚುನಾವಣೆ ಮೊದಲಾದ ವಿಷಯಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಗುವುದು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...