alex Certify
ಕನ್ನಡ ದುನಿಯಾ       Mobile App
       

Kannada Duniya

ಪ್ರಚಾರ ಕಣಕ್ಕೆ ಸೋನಿಯಾ ಗಾಂಧಿ : ನಾಲ್ಕು ರೋಡ್ ಶೋನಲ್ಲಿ ಮೋದಿ ಅಬ್ಬರ

ಕರ್ನಾಟಕ ವಿಧಾನಸಭಾ ಚುನಾವಣಾ ಕಣ ರಂಗೇರಿದೆ. ಮಂಗಳವಾರ ದಿಗ್ಗಜರ ದಂಡೇ ಪ್ರಚಾರದ ಅಖಾಡಕ್ಕಿಳಿಯುತ್ತಿದೆ. ಒಂದು ಕಡೆ ಪ್ರಧಾನ ಮಂತ್ರಿ ಮೋದಿ ಪ್ರಚಾರ ರ್ಯಾಲಿ ನಡೆಸಲಿದ್ದು, ಇನ್ನೊಂದೆಡೆ ಸೋನಿಯಾ ಗಾಂಧಿ ಮೊದಲ ಬಾರಿ ಪ್ರಚಾರ ಕಣಕ್ಕಿಳಿಯಲಿದ್ದಾರೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಂಗಳವಾರ ಮೂರು ರ್ಯಾಲಿಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ವಿಜಯಪುರ, ಮಂಗಳೂರು ಮತ್ತು ಬೆಂಗಳೂರಿನಲ್ಲಿ ಮೋದಿ ರ್ಯಾಲಿ ನಡೆಸಲಿದ್ದಾರೆ. ಇತ್ತ ಸೋನಿಯಾ ಗಾಂಧಿ ಬಿಜಾಪುರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಬೆಂಬಲಿಗರನ್ನು ಭೇಟಿಯಾಗಲಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕೂಡ ಪ್ರಚಾರ ನಡೆಸಲಿದ್ದಾರೆ.

ಬಿಜೆಪಿ ಅಧ್ಯಕ್ಷ ಅಮಿತ್ ಶಾ ಕೂಡ ಇಂದು ನಾಲ್ಕು ರೋಡ್ ಶೋಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಇನ್ನು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಮತಬೇಟಿ ನಡೆಸಲಿದ್ದಾರೆ. ರಾಷ್ಟ್ರ ನಾಯಕರು ರಾಜ್ಯದತ್ತ ಮುಖ ಮಾಡಿದ್ದು, ನಾಲ್ಕೈದು ದಿನಗಳಲ್ಲಿ ರಾಜ್ಯದ ಚಿತ್ರಣ ಸಂಪೂರ್ಣ ಬದಲಾಗುವ ಸಾಧ್ಯತೆಯಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...