alex Certify
ಕನ್ನಡ ದುನಿಯಾ       Mobile App
       

Kannada Duniya

ಸಮಾವೇಶಕ್ಕೆ ಜನಸಾಗರ, ವೇದಿಕೆ ಬಳಿಯಲ್ಲೇ ರೆಡಿಯಾಯ್ತು PMO ಕಚೇರಿ

ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಗೆ ಭರ್ಜರಿ ತಯಾರಿ ನಡೆಸಿರುವ ಬಿ.ಜೆ.ಪಿ. ಯ ಪರಿವರ್ತನಾ ಯಾತ್ರೆಯ ಸಮಾರೋಪ ಸಮಾರಂಭ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುತ್ತಿದೆ.

ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ. ರಾಜ್ಯದ ವಿವಿಧೆಡೆಯಿಂದ ಅಪಾರ ಸಂಖ್ಯೆಯ ಬಿ.ಜೆ.ಪಿ. ಕಾರ್ಯಕರ್ತರು ಆಗಮಿಸುತ್ತಿದ್ದಾರೆ. ರೈಲು, ಬಸ್, ಇತರೆ ವಾಹನಗಳಲ್ಲಿ ಆಗಮಿಸಿದ ಕಾರ್ಯಕರ್ತರು ಅರಮನೆ ಮೈದಾನದತ್ತ ಹೆಜ್ಜೆ ಹಾಕುತ್ತಿದ್ದಾರೆ.

ಸಮಾವೇಶದಲ್ಲಿ ಪಾಲ್ಗೊಂಡವರಿಗೆ ಊಟ, ತಿಂಡಿ, ಕುಡಿಯುವ ನೀರು ವ್ಯವಸ್ಥೆ ಮಾಡಲಾಗಿದೆ. ಮೈದಾನದ ಸುತ್ತ ಪ್ರತ್ಯೇಕ ಶೌಚಾಲಯ ಅಳವಡಿಸಲಾಗಿದೆ. 2 ಲಕ್ಷಕ್ಕೂ ಅಧಿಕ ಆಸನಗಳ ವ್ಯವಸ್ಥೆ ಮಾಡಲಾಗಿದೆ.

ಇನ್ನು ಪ್ರಧಾನಿ ಮೋದಿ ಸೂಚನೆ ಹಿನ್ನಲೆಯಲ್ಲಿ ವೇದಿಕೆ ಹಿಂಭಾಗದಲ್ಲಿ ವಿಶೇಷವಾಗಿ ತಾತ್ಕಾಲಿಕ ಪಿ.ಎಂ.ಒ.(ಪ್ರಧಾನ ಮಂತ್ರಿ ಕಚೇರಿ) ನಿರ್ಮಿಸಲಾಗಿದೆ. ದೂರವಾಣಿ, ಹೈಸ್ಪೀಡ್ ಇಂಟರ್ ನೆಟ್, ವಿಡಿಯೋ ಕಾನ್ಫರೆನ್ಸ್, ಮೀಟಿಂಗ್ ರೂಂ, ಎಮರ್ಜೆನ್ಸಿ ಮ್ಯಾನೇಜ್ ಮೆಂಟ್ ವ್ಯವಸ್ಥೆ ಮಾಡಲಾಗಿದೆ. ಜಗತ್ತಿನ ಎಲ್ಲಾ ಕಡೆಗೂ ಕ್ಷಣ ಮಾತ್ರದಲ್ಲಿ ಸಂಪರ್ಕಿಸುವ ವ್ಯವಸ್ಥೆ ಕಲ್ಪಿಸಿದೆ. ತುರ್ತು ಸಂದರ್ಭದಲ್ಲಿ ಬಳಸಿಕೊಳ್ಳಲು ಕೆಲವು ಕಡೆ ಇಂತಹ ತಾತ್ಕಾಲಿಕ ಕಚೇರಿಗಳನ್ನು ನಿರ್ಮಿಸಲಾಗುತ್ತದೆ. ಅದೇ ರೀತಿ ಅರಮನೆ ಮೈದಾನದಲ್ಲಿ ತಾತ್ಕಾಲಿಕ ಪಿ.ಎಂ.ಒ. ಕಚೇರಿ ನಿರ್ಮಿಸಿದ್ದು, ಬಿಗಿ ಭದ್ರತೆ ಒದಗಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...