alex Certify
ಕನ್ನಡ ದುನಿಯಾ       Mobile App
       

Kannada Duniya

ಐ-20, ಮಾರುತಿ ಮುಖಾಮುಖಿ, 3 ಮಂದಿ ಸಾವು

accident1-2

ಹಾಸನ: ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ಸ್ಥಳದಲ್ಲೇ ಮೂರು ಮಂದಿ ದುರಂತ ಸಾವು ಕಂಡ ಘಟನೆ ಹಾಸನದಲ್ಲಿ ನಡೆದಿದೆ. ಬೆಂಗಳೂರು ಮೂಲದ ದಂಪತಿ ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ.

ಬೆಂಗಳೂರು ಕತ್ರಿಗುಪ್ಪೆಯ ಕಾರು ಚಾಲಕ ಬಾಬು(45), ಮೋಹನ್ ನಾಯ್ಡು (54), ಅವರ ಪತ್ನಿ ಮಂಜುಳಾ (50) ಮೃತಪಟ್ಟವರು. ಧರ್ಮಸ್ಥಳದಿಂದ ಬೆಂಗಳೂರಿಗೆ ಮಾರುತಿ ಕಾರಿನಲ್ಲಿ ಹೊರಟಿದ್ದರು. ಹಾಸನದ ಚನ್ನಪಟ್ಟಣ ರಸ್ತೆಯಲ್ಲಿ ಎದುರಿನಿಂದ ಬಂದ ಐ-20 ಕಾರ್ ಡಿಕ್ಕಿ ಹೊಡೆದು ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾರುಗಳು ನಜ್ಜುಗುಜ್ಜಾಗಿದ್ದು, ಘಟನೆಯಲ್ಲಿ ಐ-20 ಕಾರಿನಲ್ಲಿದ್ದ ಇಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹಾಸನದ ಆಸ್ಪತ್ರೆಗೆ ಸೇರಿಸಲಾಗಿದೆ.

ಅತಿ ವೇಗ, ಅಜಾಗರೂಕತೆಯಿಂದ ವಾಹನ ಚಾಲನೆ ಮಾಡಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಘಟನೆಯಿಂದಾಗಿ ವಾಹನ ಸಾಲುಗಟ್ಟಿ ನಿಂತಿದ್ದು, ಕೆಲಕಾಲ ಸಂಚಾರಕ್ಕೆ ತೊಂದರೆಯಾಗಿತ್ತು. ಸ್ಥಳಕ್ಕೆ ಭೇಟಿ ನೀಡಿದ್ದ ಪೊಲೀಸರು ಮುಂದಿನಕ್ರಮ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...