alex Certify
ಕನ್ನಡ ದುನಿಯಾ       Mobile App
       

Kannada Duniya

ಜಗದೀಶ್ ಶೆಟ್ಟರ್, ಪ್ರಹ್ಲಾದ್ ಜೋಶಿ ಅರೆಸ್ಟ್

shettar

ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್, ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ ಅವರನ್ನು ಧಾರವಾಢ ಪೊಲೀಸರು ಬಂಧಿಸಿದ್ದಾರೆ. ಚುನಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ ಎಂದು ಹೇಳಲಾಗಿದೆ.

ಧಾರವಾಡ ತಾಲ್ಲೂಕಿನ ಹೆಬ್ಬಳ್ಳಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಹಳ್ಳಿಯೊಂದರಲ್ಲಿ ಸಭೆ ನಡೆಸಿದ್ದಕ್ಕೆ ಪೊಲೀಸರು ಆಕ್ಷೇಪಿಸಿ ಸಭೆ ನಡೆಸದಂತೆ ತಾಕೀತು ಮಾಡಿದ್ದರು. ಅವರು ಸಭೆ ನಡೆಸಿದ್ದನ್ನು ತಿಳಿದ ಬಿಜೆಪಿ ಅಭ್ಯರ್ಥಿ ಯೋಗೀಶ್ ಗೌಡ ಅವರೂ ಪೊಲೀಸರ ಸೂಚನೆ ನಿರ್ಲಕ್ಷಿಸಿ ಸಭೆ ನಡೆಸಿದ್ದರಿಂದ ಅವರನ್ನು ಬಂಧಿಸಲಾಗಿತ್ತು. ಯೋಗೀಶ್ ಗೌಡ ಅವರು ನೀತಿಸಂಹಿತೆ ಉಲ್ಲಂಘಿಸಿ ಚುನಾವಣೆಯ ಹಿಂದಿನ ರಾತ್ರಿ ದೇವಾಲಯದಲ್ಲಿ ಸಭೆ ನಡೆಸಿದ್ದರೆನ್ನಲಾಗಿದ್ದು, ಅವರನ್ನು ಪೊಲೀಸರು ಬಂಧಿಸಿದ್ದರು.

ಯೋಗೀಶ್ ಗೌಡ ಅವರ ಬಿಡುಗಡೆಗೆ ಒತ್ತಾಯಿಸಿ ಬಿಜೆಪಿ ನಾಯಕರಾದ ಜಗದೀಶ್ ಶೆಟ್ಟರ್, ಪ್ರಹ್ಲಾದ್ ಜೋಶಿ ನೇತೃತ್ವದಲ್ಲಿ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಡಿಸಿ ಕಚೇರಿಗೆ ನುಗ್ಗಲು ಯತ್ನಿಸಿದ್ದರು. ಈ ವೇಳೆ ಘರ್ಷಣೆ ಉಂಟಾಗಿ, ಮುಂಜಾಗ್ರತೆ ಕ್ರಮದಿಂದ ಇಬ್ಬರನ್ನೂ ಬಂಧಿಸಿದ ಪೊಲೀಸರು, ನಂತರ ಬಿಡುಗಡೆ ಮಾಡಿದ್ದಾರೆ ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...