alex Certify
ಕನ್ನಡ ದುನಿಯಾ       Mobile App
       

Kannada Duniya

ಇನ್ನೂ ಪತ್ತೆಯಾಗಿಲ್ಲ ನಲಪಾಡ್ ಹ್ಯಾರಿಸ್

ಬೆಂಗಳೂರು: ಯುವಕನೊಬ್ಬನ ಮೇಲೆ ಹಿಗ್ಗಾಮುಗ್ಗಾ ಥಳಿಸಿದ್ದ ಶಾಸಕ ಎನ್.ಎ. ಹ್ಯಾರಿಸ್ ಅವರ ಪುತ್ರ ಮೊಹಮ್ಮದ್ ನಲಪಾಡ್ ಹ್ಯಾರಿಸ್ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ಉದ್ಯಮಿಯ ಪುತ್ರ ವಿದ್ವತ್ ಮೇಲೆ ನಲಪಾಡ್ ಮತ್ತು ಆತನ ಸಹಚರರು ಹಲ್ಲೆ ನಡೆಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆದರೆ, ನಲಪಾಡ್ ಹ್ಯಾರಿಸ್ ಪತ್ತೆಯಾಗಿಲ್ಲ. ಇಂದು ಅವರು ನ್ಯಾಯಾಲಯಕ್ಕೆ ಶರಣಾಗುವ ಸಾಧ್ಯತೆ ಇದೆ.

ಇನ್ನು ಆರೋಪಿಗಳ ಬಂಧನಕ್ಕೆ ಮುಂದಾಗದ ಕಾರಣಕ್ಕೆ ಇನ್ಸ್ ಪೆಕ್ಟರ್ ಸಸ್ಪೆಂಡ್ ಆಗಿದ್ದು, ಪ್ರಕರಣವನ್ನು ಸಿ.ಸಿ.ಬಿ.ಗೆ ಹಸ್ತಾಂತರಿಸಲಾಗಿದೆ.

ನಲಪಾಡ್ ನನ್ನು ಕಾಂಗ್ರೆಸ್ ನಿಂದ ಉಚ್ಚಾಟಿಸಲಾಗಿದ್ದು, ಆತನ ಕೃತ್ಯಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಯು.ಬಿ. ಸಿಟಿ ರೆಸ್ಟೊರೆಂಟ್ ಮತ್ತು ಮಲ್ಯ ಆಸ್ಪತ್ರೆಯಲ್ಲಿ ವಿದ್ವತ್ ಮೇಲೆ ನಲಪಾಡ್ ಹ್ಯಾರಿಸ್ ಮತ್ತು ಆತನ ಸಹಚರರು ಭೀಕರವಾಗಿ ಹಲ್ಲೆ ನಡೆಸಿದ್ದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...