alex Certify
ಕನ್ನಡ ದುನಿಯಾ       Mobile App
       

Kannada Duniya

ಪೊಲೀಸರಿಗೆ ಶರಣಾಗಲು ಪುತ್ರನಿಗೆ ಶಾಸಕ ಹ್ಯಾರಿಸ್ ಸೂಚನೆ

ಬೆಂಗಳೂರು: ಕಾನೂನಿಗಿಂತ ಯಾರೂ ದೊಡ್ಡವರಲ್ಲ, ಪೊಲೀಸರಿಗೆ ಶರಣಾಗುವಂತೆ ಪುತ್ರನಿಗೆ ಸೂಚನೆ ನೀಡಲಾಗಿದೆ ಎಂದು ಶಾಂತಿನಗರ ಶಾಸಕ ಎನ್.ಎ. ಹ್ಯಾರಿಸ್ ಹೇಳಿದ್ದಾರೆ.

ಪೊಲೀಸರು ಕಾನೂನು ಪ್ರಕಾರವೇ ಕ್ರಮ ಕೈಗೊಳ್ಳಲಿದ್ದಾರೆ. ಆತ ನನ್ನೊಂದಿಗೆ ಸಂಪರ್ಕದಲ್ಲಿಲ್ಲ. ಆತ ತಾಯಿಗೆ ಕರೆ ಮಾಡಿ ಮಾತನಾಡಿದ್ದು, ಪೊಲೀಸರಿಗೆ ಶರಣಾಗಲು ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

ಪೊಲೀಸರು ಕ್ರಮ ಕೈಗೊಳ್ಳಲಿದ್ದಾರೆ. ಆದರೆ, ಪ್ರತಿಪಕ್ಷಗಳು ಈ ವಿಚಾರದಲ್ಲಿ ರಾಜಕೀಯ ಮಾಡ್ತಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಯು.ಬಿ. ಸಿಟಿ ರೆಸ್ಟೊರೆಂಟ್ ಮತ್ತು ಮಲ್ಯ ಆಸ್ಪತ್ರೆಯಲ್ಲಿ ಉದ್ಯಮಿ ಪುತ್ರ ವಿದ್ವತ್ ಮೇಲೆ ನಲಪಾಡ್ ಹ್ಯಾರಿಸ್ ಮತ್ತು ಆತನ ಸಹಚರರು ಭೀಕರವಾಗಿ ಹಲ್ಲೆ ನಡೆಸಿದ್ದರು. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಐವರನ್ನು ಬಂಧಿಸಿದ್ದಾರೆ. ಆದರೆ, ನಲಪಾಡ್ ಹ್ಯಾರಿಸ್ ತಲೆಮರೆಸಿಕೊಂಡಿದ್ದು, ಆತನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ಆತ ಕಬ್ಬನ್ ಪಾರ್ಕ್ ಠಾಣೆ ಪೊಲೀಸರಿಗೆ ಶರಣಾಗುವ ಸಾಧ್ಯತೆ ಇದೆ. ಶರಣಾದ ಬಳಿಕ ಆತನನ್ನು ಪೊಲೀಸರು ಕೋರ್ಟ್ ಗೆ ಹಾಜರುಪಡಿಸಲಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...