alex Certify
ಕನ್ನಡ ದುನಿಯಾ       Mobile App
       

Kannada Duniya

ಠಾಣೆಯಲ್ಲೇ ಸಬ್ ಇನ್ಸ್ಪೆಕ್ಟರ್ ಭರ್ಜರಿ ಡಾನ್ಸ್…!

ಠಾಣೆಯಲ್ಲೇ ಸಿಬ್ಬಂದಿ ಹಾಗೂ ಆರೋಪಿ ಮುಂದೆ ಸಬ್ ಇನ್ಸ್ಪೆಕ್ಟರ್ ಒಬ್ಬರು ಭರ್ಜರಿ ಡಾನ್ಸ್ ಮಾಡಿದ್ದು, ಈ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಕೋಲಾರ ಜಿಲ್ಲೆ ಬೇತಮಂಗಲ ಪೊಲೀಸ್ ಠಾಣೆಯಲ್ಲಿ ಈ ಘಟನೆ ನಡೆದಿದ್ದು, ಸಿಬ್ಬಂದಿ ಮುಂದೆ ಹೆಜ್ಜೆ ಹಾಕಿದ ಸಬ್ ಇನ್ಸ್ಪೆಕ್ಟರ್ ಹೊನ್ನೇಗೌಡ, ಎದುರಿಗಿದ್ದ ಆರೋಪಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಅಷ್ಟೇ ಅಲ್ಲ, ಆತನಿಂದಲೂ ಡಾನ್ಸ್ ಮಾಡಿಸಿದ್ದಾರೆ.

ಸಬ್ ಇನ್ಸ್ಪೆಕ್ಟರ್ ಅವರ ಈ ಹುಚ್ಚಾಟವನ್ನು ಠಾಣೆಯಲ್ಲಿದ್ದ ಪೇದೆಗಳು ಮೂಕ ಪ್ರೇಕ್ಷಕರಾಗಿ ವೀಕ್ಷಿಸಿದ್ದು, ಇದೆಲ್ಲವನ್ನೂ ತಮ್ಮ ಮೊಬೈಲ್ ನಲ್ಲಿ ಚಿತ್ರೀಕರಿಸಿಕೊಂಡ ಸಿಬ್ಬಂದಿಯೊಬ್ಬರು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದಾರೆ.

ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆಯೇ ಸಬ್ ಇನ್ಸ್ಪೆಕ್ಟರ್ ಅವರ ವರ್ತನೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಘಟನೆ ಕುರಿತು ಪ್ರತಿಕ್ರಿಯಿಸಿರುವ ಜಿಲ್ಲಾ ರಕ್ಷಣಾಧಿಕಾರಿ ಲೋಕೇಶ್ ಕುಮಾರ್, ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...