alex Certify
ಕನ್ನಡ ದುನಿಯಾ       Mobile App
       

Kannada Duniya

ಪುತ್ರಿ ಮೇಲೆ ಅಪ್ಪನಿಂದಲೇ ಅತ್ಯಾಚಾರ

rape tyu 30

ಹೆಣ್ಣುಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಪ್ರಕರಣ ಹೆಚ್ಚಾಗಿವೆ. ಸಾಮಾನ್ಯವಾಗಿ ಪರಿಚಯಸ್ಥರು, ನೆರೆಹೊರೆಯವರಿಂದಲೇ ಹೆಚ್ಚಾಗಿ ಹೆಣ್ಣುಮಕ್ಕಳ ಮೇಲೆ ದೌರ್ಜನ್ಯ ನಡೆಯುತ್ತವೆ ಎಂದು ಹೇಳಲಾಗಿದೆ. ಆದರೆ, ತಂದೆಯಿಂದಲೇ ನಡೆದ ಪ್ರಕರಣವೊಂದರ ವರದಿ ಇಲ್ಲಿದೆ ನೋಡಿ.

ತಂದೆಯೇ ಮಗಳಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣ ತುಮಕೂರು ಜಿಲ್ಲೆ ತಿಪಟೂರು ತಾಲ್ಲೂಕಿನ ಕಿಬ್ಬನಹಳ್ಳಿ ಹೋಬಳಿಯಲ್ಲಿ ನಡೆದಿದೆ. ಆರೋಪಿ ತಂದೆ, ಮಗಳ ಮೇಲೆಯೇ ಕಾಮುಕ ದೃಷ್ಟಿ ಬೀರಿದ್ದಲ್ಲದೇ, ಆಕೆಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಕಾಮುಕರಿಗೆ ಕಣ್ಣಿಲ್ಲ ಎಂಬಂತೆ ವರ್ತಿಸುತ್ತಿದ್ದ ಈ ನೀಚ ಮನೆಯಲ್ಲಿ ಒಂಟಿಯಾಗಿದ್ದ ಸಂದರ್ಭದಲ್ಲೆಲ್ಲಾ ಮಗಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ. ಅಪ್ಪನ ವರ್ತನೆಯಿಂದ ಮಗಳು ಮನನೊಂದಿದ್ದಳು.

ಮನೆಯಲ್ಲಿ ಮಗಳಿಗೆ ತಂದೆಯೇ ಲೈಂಗಿಕ ಕಿರುಕುಳ ನೀಡುತ್ತಿದ್ದ ವಿಚಾರ ತಾಯಿಗೆ ಗೊತ್ತಾಗಿದೆ. ಆಕೆ, ಸಂಬಂಧಿಕರ ನೆರವಿನಿಂದ ಕಿಬ್ಬನಹಳ್ಳಿ ಠಾಣೆ ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿ ಮುಂದಿನ ಕ್ರಮ ಜರುಗಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...