alex Certify
ಕನ್ನಡ ದುನಿಯಾ       Mobile App
       

Kannada Duniya

ಯುವತಿಯನ್ನು ಗರ್ಭಿಣಿಯಾಗಿಸಿ ವಂಚಿಸಿದ್ದವನ ಅರೆಸ್ಟ್

police-arrest-handcuff

ಯುವತಿಯೊಬ್ಬಳನ್ನು ಮದುವೆಯಾಗುವುದಾಗಿ ನಂಬಿಸಿ ಆಕೆಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ್ದ ರಾಜಕೀಯ ಪಕ್ಷವೊಂದರ ಮುಖಂಡನೊಬ್ಬನನ್ನು ಬಂಧಿಸಿದ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ. ಪರಮೇಶ್ ಬಂಧಿತ ಆರೋಪಿಯಾಗಿದ್ದಾನೆ.

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಗ್ರಾಮವೊಂದರ ಪಂಚಾಯಿತಿ ಸದಸ್ಯನಾಗಿರುವ ಪರಮೇಶ್ ಅದೇ ಗ್ರಾಮದ ಯುವತಿಯೊಬ್ಬರನ್ನು ಮದುವೆಯಾಗುವುದಾಗಿ ದೈಹಿಕ ಸಂಪರ್ಕ ಬೆಳೆಸಿದ್ದ. ಆಕೆ ತುಂಬು ಗರ್ಭಿಣಿಯಾಗಿದ್ದು, ಮದುವೆಯಾಗಲು ನಿರಾಕರಿಸಿದ್ದನಲ್ಲದೇ, ಈ ವಿಷಯವನ್ನು ಬಹಿರಂಗಪಡಿಸದಂತೆ ಒತ್ತಡ ಹೇರಿ 5 ಲಕ್ಷ ರೂಪಾಯಿ ಕೊಡುವುದಾಗಿ ಆಮಿಷ ಒಡ್ಡಿದ್ದ. ಇದೀಗ ಯುವತಿ ಗುಂಡ್ಲುಪೇಟೆ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಯುವತಿಗೆ ಈ ಹಿಂದೆ ಕೇರಳದ ಯುವಕನೊಂದಿಗೆ ಮದುವೆಯಾಗಿದ್ದು, ಆತನಿಂದ ದೂರವಾಗಿ ತವರು ಮನೆಯಲ್ಲಿದ್ದಳು. ಆಕೆಯ ಪರಿಚಯ ಮಾಡಿಕೊಂಡ ಪರಮೇಶ್ ಮರು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ್ದ. ಗರ್ಭಿಣಿಯಾದ ನಂತರ ವಂಚಿಸಿದ್ದ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...