alex Certify
ಕನ್ನಡ ದುನಿಯಾ       Mobile App
       

Kannada Duniya

ನಾಲ್ವರು ಇಂಜಿನಿಯರ್ ಗಳ ‘ಪವರ್ ಕಟ್’

KPTCL-Recruitment-2015

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದಲ್ಲಿ ಬಜೆಟ್ ಮಂಡಿಸುತ್ತಿದ್ದ ಸಂದರ್ಭದಲ್ಲಿ ವಿದ್ಯುತ್ ಕಡಿತಗೊಂಡ ಘಟನೆಗೆ ಸಂಬಂಧಿಸಿದಂತೆ ಕ್ರಮ ತೆಗೆದುಕೊಳ್ಳಲು ಮುಂದಾಗಿರುವ ಇಂಧನ ಇಲಾಖೆ, ನಾಲ್ವರು ಅಧಿಕಾರಿಗಳನ್ನು ಅಮಾನತು ಮಾಡಿ ಆದೇಶ ಹೊರಡಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಹೌದು. ತಮ್ಮ ಹನ್ನೊಂದನೆಯ ಮಹತ್ವಾಕಾಂಕ್ಷಿ ಬಜೆಟ್ ಮಂಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಾರಂಭಿಸುತ್ತಿದ್ದಂತೆ ವಿದ್ಯುತ್ ಎರಡು ಬಾರಿ ಕೈಕೊಟ್ಟಿತ್ತು. ಈ ಸಮಯದಲ್ಲಿ ವಿಚಲಿತರಾದ ಸಿದ್ದರಾಮಯ್ಯ, ಅವರು ಅಧಿಕಾರಿಯೊಬ್ಬರ ಮೊಬೈಲ್ ಫ್ಲಾಶ್ ಲೈಟ್ ನಲ್ಲಿ ಭಾಷಣ ಓದಲು ಯತ್ನಿಸಿದ್ದರು. ಬಳಿಕ ವಿದ್ಯುತ್ ಬಂದಾಗ ಭಾಷಣ ಮುಂದುವರಿಸಿದ್ದರಲ್ಲದೇ ಈ ಸಮಯದಲ್ಲಿ ಪ್ರತಿ ಪಕ್ಷಗಳ ವ್ಯಂಗ್ಯದ ಮಾತುಗಳಿಂದ ಕೋಪಗೊಂಡು ಇಂಧನ ಸಚಿವರನ್ನು ತರಾಟೆಗೆ ತೆಗೆದುಕೊಂಡಿದ್ದರು ಎನ್ನಲಾಗಿದೆ.

ಇದೀಗ ಕರ್ತವ್ಯಲೋಪ ಆರೋಪದ ಮೇಲೆ ವಿಧಾನಸೌಧ ವಿದ್ಯುತ್ ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರ ಸಿ.ರಾಮಲಿಂಗಯ್ಯ ಸೇರಿದಂತೆ ನಾಲ್ವರು ಇಂಜಿನಿಯರ್ ಗಳನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ ಎಂಬ ಮಾಹಿತಿ ಲಭಿಸಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...