alex Certify
ಕನ್ನಡ ದುನಿಯಾ       Mobile App
       

Kannada Duniya

ಗ್ರಾಹಕರಿಗೆ ವಿದ್ಯುತ್ ದರ ಹೆಚ್ಚಳ ಶಾಕ್

power-hik

ಬೆಂಗಳೂರು: ವಿದ್ಯುತ್ ದರ ಹೆಚ್ಚಳ ಮಾಡುವಂತೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗಕ್ಕೆ(ಕೆ.ಇ.ಆರ್.ಸಿ.) ವಿದ್ಯುತ್ ಕಂಪನಿಗಳು ಪ್ರಸ್ತಾವನೆ ಸಲ್ಲಿಸಿವೆ.

ಪ್ರತಿ ಯೂನಿಟ್ ವಿದ್ಯುತ್ ಗೆ 1.40 ರೂ. ಏರಿಕೆ ಮಾಡಬೇಕೆಂದು ವಿದ್ಯುತ್ ಕಂಪನಿಗಳು ಮನವಿ ಮಾಡಿದ್ದು, ರಾಜ್ಯದಲ್ಲಿ ತೀವ್ರ ಬರಗಾಲವಿದೆ. ಮಳೆ ಕೊರತೆಯಿಂದಾಗಿ ಜಲಾಶಯಗಳು ಬರಿದಾಗಿವೆ. ಜಲ ವಿದ್ಯುತ್ ಉತ್ಪಾದನೆ ಕುಸಿತವಾಗಿರುವುದರಿಂದ ಬೇಡಿಕೆಯ ವಿದ್ಯುತ್ ಪೂರೈಕೆಗೆ ಹೊರ ರಾಜ್ಯಗಳಿಂದ ವಿದ್ಯುತ್ ಖರೀದಿಸುವ ಅನಿವಾರ್ಯತೆ ಎದುರಾಗಿದೆ. ಹಾಗಾಗಿ ಪ್ರತಿ ಯೂನಿಟ್ ವಿದ್ಯುತ್ ಗೆ 1.40 ರೂ. ಹೆಚ್ಚಳ ಮಾಡಬೇಕೆಂದು ಪ್ರಸ್ತಾವನೆ ಸಲ್ಲಿಸಲಾಗಿದೆ.

ವಿದ್ಯುತ್ ದರ ಏರಿಕೆಗೆ ಕಂಪನಿಗಳು ಪ್ರತಿವರ್ಷ ಪ್ರಸ್ತಾವನೆ ಸಲ್ಲಿಸುತ್ತವೆ. ಆದರೆ, ಈ ಬಾರಿ ಹೆಚ್ಚಿನ ಪ್ರಮಾಣದಲ್ಲಿ ದರ ಏರಿಕೆಗೆ ಪ್ರಸ್ತಾವನೆ ಸಲ್ಲಿಸಿವೆ.

ಕಳೆದ ವರ್ಷ 1.02 ರೂ. ಏರಿಕೆಗೆ ಪ್ರಸ್ತಾವನೆ ಸಲ್ಲಿಸಿದ್ದು, 30 ಪೈಸೆ ಹೆಚ್ಚಳಕ್ಕೆ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ ಸಮ್ಮತಿಸಿತ್ತು. ಈ ಬಾರಿ ಉತ್ಪಾದನೆ ವೆಚ್ಛ ಅಧಿಕವಾಗಿರುವುದು ಮತ್ತು ಹೊರ ರಾಜ್ಯಗಳಿಂದ ವಿದ್ಯುತ್ ಖರೀದಿಸುವ ಅನಿವಾರ್ಯತೆ ಎದುರಾಗಿರುವುದರಿಂದ ಪ್ರಸ್ತಾವಿತ ವಿದ್ಯುತ್ ದರದ ಬಗ್ಗೆ ಆಯೋಗ ಯಾವ ಕ್ರಮ ಕೈಗೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...