alex Certify
ಕನ್ನಡ ದುನಿಯಾ       Mobile App
       

Kannada Duniya

ಟಿಸಿ ದುರಸ್ತಿ ವೇಳೆ ನಡೀತು ಅವಘಡ, ಇಬ್ಬರ ಸಾವು

ವಿಜಯಪುರ: ವಿದ್ಯುತ್ ಪರಿವರ್ತಕ(ಟಿಸಿ) ದುರಸ್ತಿ ಮಾಡುವ ಸಂದರ್ಭದಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ, ಇಬ್ಬರು ಮೃತಪಟ್ಟ ಘಟನೆ ವಿಜಯಪುರ ಜಿಲ್ಲೆ ಬಸವನಬಾಗೇವಾಡಿಯಲ್ಲಿ ನಡೆದಿದೆ.

ಮೃತರನ್ನು ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲ್ಲೂಕು ಹೊನ್ನೂರಿನ ಮಂಜುನಾಥ್ ಕಣವಿಮಲ್ಯ(19), ತಿಪ್ಪೇಶ್(20) ಎಂದು ಗುರುತಿಸಲಾಗಿದೆ. ಟಿಸಿ ದುರಸ್ತಿಗೊಳಿಸುವ ಸಂದರ್ಭದಲ್ಲಿ ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಇಬ್ಬರೂ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಬಸವನಬಾಗೇವಾಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...