alex Certify
ಕನ್ನಡ ದುನಿಯಾ       Mobile App
       

Kannada Duniya

ಸಹೋದರಿ ಜೊತೆಗೇ ದೈಹಿಕ ಸಂಪರ್ಕ

sistt

ಸಹೋದರಿಯೊಂದಿಗೆ ಲೈಂಗಿಕ ಸಂಪರ್ಕ ಹೊಂದಿ ಆಕೆ ಗರ್ಭಿಣಿಯಾಗಲು ಕಾರಣನಾದ ಆರೋಪಿಯೊಬ್ಬನನ್ನು ಶಿವಮೊಗ್ಗ ಜಿಲ್ಲೆ ಸಾಗರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸಂದೀಪ್ ಬಂಧಿತ ಆರೋಪಿಯಾಗಿದ್ದಾನೆ.

ದೊಡ್ಡಪ್ಪನ ಮಗಳೊಂದಿಗೆ ಲೈಂಗಿಕ ಸಂಪರ್ಕ ಹೊಂದಿದ್ದ ಸಂದೀಪ ಆಕೆ ಗರ್ಭಿಣಿಯಾಗಲು ಕಾರಣನಾಗಿದ್ದ. ಸಹೋದರಿ ಗರ್ಭ ಧರಿಸಲು ಕಾರಣನಾದ ಸಂದೀಪನನ್ನು ಸಾಗರ ಗ್ರಾಮಾಂತರ ಠಾಣೆಯ ಪೊಲೀಸರು ಆನಂದಪುರದಲ್ಲಿ ಬಂಧಿಸಿದ್ದು, ಲೈಂಗಿಕ ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈತ ದೊಡ್ಡಪ್ಪನ ಮಗಳೊಂದಿಗೆ ದೈಹಿಕ ಸಂಪರ್ಕ ಹೊಂದಿ ಆಕೆ ಗರ್ಭಿಣಿಯಾಗಲು ಕಾರಣನಾಗಿಲ್ಲದೇ, ಅಬಾರ್ಷನ್ ಮಾಡಿಸಲು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದ ಎಂದು ಹೇಳಲಾಗಿದೆ.

ಆಸ್ಪತ್ರೆಯಲ್ಲಿ ವೈದ್ಯರು ಪರೀಕ್ಷೆ ನಡೆಸಿ ಅಬಾರ್ಷನ್ ಮಾಡಲು ಒಪ್ಪದೇ, ಪೊಲೀಸರಿಗೆ ಮಾಹಿತಿ ನೀಡಿದ್ದರು. ಇದರ ಆಧಾರದ ಮೇಲೆ ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದಾಗ ತಾನೇ ಸಹೋದರಿ ಗರ್ಭ ಧರಿಸಲು ಕಾರಣ ಎಂದು ತಿಳಿಸಿದ್ದಾನೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...