alex Certify
ಕನ್ನಡ ದುನಿಯಾ       Mobile App
       

Kannada Duniya

ಪ್ರಜ್ವಲ್ ರೇವಣ್ಣ ಸ್ಪರ್ಧೆಗೆ ಹೆಚ್.ಡಿ.ಕೆ. ಗ್ರೀನ್ ಸಿಗ್ನಲ್…?

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಜರಾಜೇಶ್ವರಿ ನಗರದಿಂದ ಕಣಕ್ಕಿಳಿಯಲು ಸಿದ್ದತೆ ನಡೆಸುತ್ತಿರುವ ಮಾಜಿ ಸಚಿವ ಹೆಚ್.ಡಿ. ರೇವಣ್ಣನವರ ಪುತ್ರ ಪ್ರಜ್ವಲ್ ರೇವಣ್ಣನವರ ಸ್ಪರ್ಧೆಗೆ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಹಸಿರು ನಿಶಾನೆ ತೋರಿಸಿದ್ದಾರೆಂದು ಹೇಳಲಾಗುತ್ತಿದೆ.

ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಕುಟುಂಬದಿಂದ ತಾವು ಹಾಗೂ ಹೆಚ್.ಡಿ. ರೇವಣ್ಣ ಮಾತ್ರ ಕಣಕ್ಕಿಳಿಯುವುದಾಗಿ ಇದುವರೆಗೂ ಹೇಳುತ್ತಿದ್ದ ಕುಮಾರಸ್ವಾಮಿಯವರು, ಮೈಸೂರಿನಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುವ ವೇಳೆ ಜೆಡಿಎಸ್ ನಿಂದ ಸ್ಪರ್ಧಿಸಲು ಯಾರು ಬೇಕಾದರೂ ಅಕಾಂಕ್ಷಿಗಳಾಗಬಹುದು. ಅದೇ ರೀತಿ ಪ್ರಜ್ವಲ್ ರೇವಣ್ಣ ಟಿಕೇಟ್ ಕೇಳುತ್ತಿರುವುದರಲ್ಲಿ ತಪ್ಪೇನಿಲ್ಲವೆಂದಿದ್ದಾರೆ.

ರಾಜರಾಜೇಶ್ವರಿ ನಗರ ಕ್ಷೇತ್ರದ ಅಭ್ಯರ್ಥಿಯನ್ನು ಇನ್ನೂ ಅಂತಿಮಗೊಳಿಸಿಲ್ಲ. ಪಕ್ಷದ ನಾಯಕರು ಚರ್ಚೆ ನಡೆಸಿದ ಬಳಿಕ ಅಂತಿಮ ನಿರ್ಧಾರ ಕೈಗೊಳ್ಳುವುದಾಗಿ ಹೇಳುವ ಮೂಲಕ ಪ್ರಜ್ವಲ್ ರೇವಣ್ಣ ಇಲ್ಲಿ ಅಭ್ಯರ್ಥಿಯಾಗಲಿದ್ದರಾ ಎಂಬ ಊಹಾಪೋಹಕ್ಕೆ ಕಾರಣರಾಗಿದ್ದಾರೆ. ಕುಮಾರಸ್ವಾಮಿಯವರ ಪತ್ನಿ ಅನಿತಾ ಕುಮಾರಸ್ವಾಮಿಯವರೂ ಈ ಬಾರಿ ಚುನಾವಣಾ ಕಣಕ್ಕಿಳಿಯಲಿದ್ದಾರೆನ್ನಲಾಗುತ್ತಿದ್ದು, ದೇವೇಗೌಡರ ಕುಟುಂಬದಿಂದ ಒಟ್ಟು ನಾಲ್ಕು ಮಂದಿ ಸ್ಪರ್ಧಿಸುವ ಸಾಧ್ಯತೆಯಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...