alex Certify
ಕನ್ನಡ ದುನಿಯಾ       Mobile App
       

Kannada Duniya

‘ಲೋಕಸಭಾ ಚುನಾವಣೆಗೆ ಪ್ರಜ್ವಲ್ ರೇವಣ್ಣ ಕಣಕ್ಕೆ’

ಹಾಸನ: ಲೋಕಸಭಾ ಚುನಾವಣೆಯಲ್ಲಿ ಮೊಮ್ಮಗ ಪ್ರಜ್ವಲ್ ರೇವಣ್ಣ ಸ್ಪರ್ಧೆ ಖಚಿತಪಡಿಸಿರುವ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ, ತಾವು ಪ್ರಧಾನಿ ಅಭ್ಯರ್ಥಿಯೂ ಅಲ್ಲ, ಚುನಾವಣೆಯಲ್ಲಿ ಸ್ಪರ್ಧಿಸುವುದೂ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಹಾಸನದ ಹರದನಹಳ್ಳಿಯಲ್ಲಿ ಮಾತನಾಡಿದ ದೇವೇಗೌಡರು, ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಪ್ರಜ್ವಲ್ ರೇವಣ್ಣ ಸ್ಪರ್ದಿಸಲಿದ್ದಾರೆ ಎಂದು ಹೇಳಿದರು. ಹಾಸನದ ಲೋಕಸಭಾ ಅಭ್ಯರ್ಥಿಯಾಗಿ ಪ್ರಜ್ವಲ್​ ರೇವಣ್ಣ ಕಣಕ್ಕಿಳಿಯಲಿದ್ದು, ನಾನೇ ಖುದ್ದಾಗಿ ನಾಲ್ಕೈದು ದಿನ ಹಾಸನದಲ್ಲಿದ್ದು, ಕಾರ್ಯಕರ್ತರ ಸಭೆ ಮಾಡುತ್ತೇನೆ ಎಂದರು. ಕಳೆದ ಬಾರಿ ಜೆಡಿಎಸ್​ ಚುನಾವಣಾ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದ ಪ್ರಜ್ವಲ್​ ಈ ಮೂಲಕ ಚುನಾವಣೆಯಲ್ಲಿ ಸ್ಪರ್ಧಿಸುವುದು ಪಕ್ಕಾ ಆದಂತಾಗಿದೆ.

ಇನ್ನು ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸಲು ಯಾರಿಂದಲೂ ಸಾಧ್ಯವಿಲ್ಲ. ಲೋಕಸಭಾ ಚುನಾವಣೆಯ ನಂತರವೂ ಸಮ್ಮಿಶ್ರ ಸರ್ಕಾರ ಬೀಳುವುದಿಲ್ಲ. ಪ್ರಧಾನಿ ಮೋದಿ, ಬಿಜೆಪಿ ನಾಯಕರ ಕನಸು ನನಸಾಗುವುದಿಲ್ಲ ಎಂದಿದ್ದಾರೆ ದೇವೇಗೌಡರು. ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕಾಂಗ್ರೆಸ್​ನೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ. ಸಮ್ಮಿಶ್ರ ಸರ್ಕಾರಕ್ಕೆ ಯಾವುದೇ ರೀತಿಯಲ್ಲೂ ತೊಂದರೆಯಾಗದ ಹಾಗೆ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತೇವೆ ಎಂದು ಗೌಡರು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...