alex Certify
ಕನ್ನಡ ದುನಿಯಾ       Mobile App
       

Kannada Duniya

ಮೋದಿಯನ್ನು ಟೀಕಿಸಿದ್ದ ಪ್ರಕಾಶ್ ರೈಗೆ ಪ್ರಶಸ್ತಿ ಮಿಸ್?

ಇತ್ತೀಚೆಗೆ ಡಿವೈಎಫ್ಐ ಸಮ್ಮೇಳನದಲ್ಲಿ ಪಾಲ್ಗೊಂಡಿದ್ದ ಖ್ಯಾತ ನಟ ಪ್ರಕಾಶ್ ರೈ, ಪ್ರಧಾನಿ ನರೇಂದ್ರ ಮೋದಿ ಹಾಗೂ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ದ ಟೀಕೆ ಮಾಡಿದ್ದ ಹಿನ್ನಲೆಯಲ್ಲಿ ಪ್ರಕಾಶ್ ರೈ ಅವರಿಗೆ ಈಗಾಗಲೇ ಘೋಷಿಸಲಾಗಿದ್ದ ಪ್ರಶಸ್ತಿಯೊಂದು ಕೈ ತಪ್ಪುವ ಸಾಧ್ಯತೆ ಇದೆ.

ಪ್ರಕಾಶ್ ರೈ ಅವರ ಸಾಧನೆಯನ್ನು ಪರಿಗಣಿಸಿ ಶಿವರಾಮ ಕಾರಂತ ಪ್ರತಿಷ್ಟಾನ, ಉಡುಪಿ ಜಿಲ್ಲೆ ಕೋಟತಟ್ಟು ಗ್ರಾಮ ಪಂಚಾಯತ್ ಸಹಯೋಗದಲ್ಲಿ ಶಿವರಾಮ ಕಾರಂತ ಪ್ರಶಸ್ತಿಯನ್ನು ಘೋಷಿಸಿತ್ತು. ಅಕ್ಟೋಬರ್ 10 ರಂದು ಶಿವರಾಮ ಕಾರಂತರ ಜನ್ಮ ದಿನಾಚರಣೆಯಿದ್ದು, ಅಂದೇ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲಾಗಿತ್ತು. ಆದರೆ ಈಗ ಪ್ರಶಸ್ತಿ ಘೋಷಣೆ ನಿರ್ಧಾರವನ್ನು ಪುನರ್ ಪರಿಶೀಲಿಸುವ ಸಾಧ್ಯತೆಯಿದೆ.

ಡಿವೈಎಫ್ಐ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಪ್ರಕಾಶ್ ರೈ, ನರೇಂದ್ರ ಮೋದಿ ಹಾಗೂ ಯೋಗಿ ಆದಿತ್ಯನಾಥ್ ನನಗಿಂತ ದೊಡ್ಡ ನಟರು. ನನಗೆ ಬಂದ ಪ್ರಶಸ್ತಿಗಳು ಅವರಿಗೆ ಸಲ್ಲಬೇಕಾದ್ದು ಎಂದು ವ್ಯಂಗ್ಯವಾಡಿದ್ದರು. ಗೌರಿ ಲಂಕೇಶ್ ಹತ್ಯೆಯನ್ನು ಸಾಮಾಜಿಕ ಜಾಲತಾಣದಲ್ಲಿ ಸಂಭ್ರಮಿಸಿದ್ದ ಕೆಲವರನ್ನು ಪ್ರಧಾನಿ ನರೇಂದ್ರ ಮೋದಿ ಫಾಲೋ ಮಾಡುತ್ತಾರೆಂಬ ಹಿನ್ನಲೆಯಲ್ಲಿ ಹಾಗೂ ಹತ್ಯೆ ಕುರಿತು ನರೇಂದ್ರ ಮೋದಿಯವರು ಯಾವುದೇ ಪ್ರತಿಕ್ರಿಯೆ ನೀಡದಿರುವ ಕಾರಣ ಪ್ರಕಾಶ್ ರೈ ಈ ಹೇಳಿಕೆ ನೀಡಿದ್ದರು.

ರೈ ಅವರ ಹೇಳಿಕೆಗೆ ಬಿಜೆಪಿ ಹಾಗೂ ಆರ್ ಎಸ್ ಎಸ್ ವಲಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಮೈಸೂರು ಸಂಸದ ಪ್ರತಾಪ್ ಸಿಂಹ, ಪ್ರಕಾಶ್ ರೈ ವಿರುದ್ದ ತೀವ್ರ ವಾಗ್ದಾಳಿ ನಡೆಸಿದ್ದರು. ಇದೀಗ ಬಿಜೆಪಿ ಅಧಿಕಾರದಲ್ಲಿರುವ ಕೋಟತಟ್ಟು ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ಪ್ರಕಾಶ್ ರೈ ಅವರಿಗೆ ಶಿವರಾಮ ಕಾರಂತ ಪ್ರಶಸ್ತಿ ನೀಡುತ್ತಿರುವುದಕ್ಕೆ ರಾಜ್ಯ ಬಿಜೆಪಿ ಹಾಗೂ ಕರಾವಳಿ ಭಾಗದ ಆರ್ ಎಸ್ ಎಸ್ ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆನ್ನಲಾಗಿದೆ. ಈ ನಿರ್ಧಾರ ಪುನರ್ ಪರಿಶೀಲಿಸುವಂತೆ ಗ್ರಾಮ ಪಂಚಾಯಿತಿ ಬಿಜೆಪಿ ಸದಸ್ಯರಿಗೆ ಸೂಚನೆ ನೀಡಲಾಗಿದೆ ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...