alex Certify
ಕನ್ನಡ ದುನಿಯಾ       Mobile App
       

Kannada Duniya

ಬಿಸಿಯೂಟ ಕಾರ್ಯಕರ್ತೆಯರನ್ನು ಭೇಟಿ ಮಾಡಿದ ಪ್ರಕಾಶ್ ರೈ ಹೇಳಿದ್ದೇನು…?

ಬೆಂಗಳೂರು: ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬಿಸಿಯೂಟ ಕಾರ್ಯಕರ್ತೆಯರ ಹೋರಾಟ ಮುಂದುವರೆದಿದ್ದು, ಮುಖ್ಯಮಂತ್ರಿ ಸಿದ್ಧರಾಮಯ್ಯ ಸಂಘಟನೆಯ ಪ್ರಮುಖರೊಂದಿಗೆ ಸಭೆ ನಡೆಸಲು ಮುಂದಾಗಿದ್ದಾರೆ.

ಕಳೆದ 5 ದಿನಗಳಿಂದ ಹಗಲು –ರಾತ್ರಿ ಕೊರೆಯುವ ಚಳಿಯನ್ನೂ ಲೆಕ್ಕಿಸದೇ ಬಿಸಿಯೂಟ ಕಾರ್ಯಕರ್ತೆಯರು ಹೋರಾಟ ನಡೆಸಿದ್ದಾರೆ. ಪ್ರತಿಭಟನೆಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ನಟ ಚೇತನ್ ಅವರು ಸ್ಥಳಕ್ಕೆ ಭೇಟಿ ನೀಡಿ, ಸರ್ಕಾರ ಬಿಸಿಯೂಟ ಕಾರ್ಯಕರ್ತೆಯರ ಬೇಡಿಕೆ ಈಡೇರಿಸಬೇಕೆಂದು ಒತ್ತಾಯಿಸಿದ್ದಾರೆ.

ಬಹುಭಾಷ ನಟ ಪ್ರಕಾಶ್ ರೈ ಅವರೂ, ಫ್ರೀಡಂ ಪಾರ್ಕ್ ಗೆ ಭೇಟಿ ನೀಡಿ ಹೋರಾಟನಿರತ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿದ್ದಾರೆ. ಪ್ರಕಾಶ್ ರೈ ಅವರಿಗೆ ಕಾರ್ಯಕರ್ತೆಯರು ಮಾಹಿತಿ ನೀಡಿದ್ದಾರೆ.

ಆಪ್ತ ಸ್ನೇಹಿತರು ನೀವು ನಡೆಸುತ್ತಿರುವ ಹೋರಾಟದ ಬಗ್ಗೆ ಮಾಹಿತಿ ನೀಡಿದ್ದರು. ನೀವು ನಿಮ್ಮ ಹಕ್ಕನ್ನು ಕೇಳಿದ್ದೀರಿ, ಕೇಂದ್ರ ಅಥವಾ ರಾಜ್ಯ ಸರ್ಕಾರವಾಗಲಿ, ನಿಮ್ಮ ಬೇಡಿಕೆಯನ್ನು ಈಡೇರಿಸಲಿ ಎಂದು ಪ್ರಕಾಶ್ ರೈ ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಅತಂತ್ರ ವಿಧಾನಸಭೆ ಸೃಷ್ಟಿಯಾದ ಬಳಿಕ ರಾಜ್ಯದಲ್ಲಿ ಆರಂಭವಾಗಿದೆಯಾ ಶಾಸಕರ ಕುದುರೆ ವ್ಯಾಪಾರ?

    View Results

    Loading ... Loading ...