alex Certify
ಕನ್ನಡ ದುನಿಯಾ       Mobile App
       

Kannada Duniya

‘ಸಿದ್ಧರಾಮಯ್ಯರದು ಬೋಗಸ್ ಕನ್ನಡ ಪ್ರೇಮ’

ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಕನ್ನಡದ ಅರಿವಿಲ್ಲ. ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ತಪ್ಪುಗಳ ಸರಮಾಲೆಯೇ ಇದೆ. ಇನ್ನು ಸಿ.ಎಂ. ಚಿಕ್ಕೋಡಿ ತಾಲ್ಲೂಕಿನಲ್ಲಿ ನಡೆದ ಪ್ರಚಾರ ಸಭೆಯಲ್ಲಿ ನನಗೆ ಮರಾಠಿ ಬರಲ್ಲ ಕ್ಷಮಿಸಿ ಎಂದು ಭಾಷಣ ಮಾಡಿದ್ದಾರೆ ಎಂದು ಸಂಸದ ಪ್ರತಾಪ್ ಸಿಂಹ ಟೀಕಿಸಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ಧರಾಮಯ್ಯ ನನಗೆ ಮರಾಠಿ ಬರುವುದಿಲ್ಲ ಎಂದು ಚುನಾವಣಾ ಪ್ರಚಾರ ಸಭೆಯಲ್ಲಿ ಹೇಳಿದ್ದು, ಕನ್ನಡಿಗರಿಗೆ ಮಾಡಿದ ಅವಮಾನವಾಗಿದೆ. ಅವರು ರಾಜ್ಯದ ಜನರ ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿದ್ದಾರೆ.

ಕಾಂಗ್ರೆಸ್ ಪಕ್ಷದವರಿಗೆ ಪ್ರಣಾಳಿಕೆ, ಪ್ರನಾಳಿಕೆ ಬಗ್ಗೆ ವ್ಯತ್ಯಾಸವೇ ಗೊತ್ತಿಲ್ಲ ಎಂದು ಕಿಡಿಕಾರಿದ ಪ್ರತಾಪ್ ಸಿಂಹ, ಮುಖ್ಯಮಂತ್ರಿಯವರಿಗೆ ನಿಜವಾದ ಕನ್ನಡ ಪ್ರೇಮ ಇದ್ದಿದ್ದರೆ, ಮರಾಠಿಗರ ಕ್ಷಮೆ ಕೇಳುತ್ತಿರಲಿಲ್ಲ. ಅವರದು ಬೋಗಸ್ ಕನ್ನಡ ಪ್ರೇಮವಾಗಿದೆ. ಈ ಚುನಾವಣೆಯಲ್ಲಿ ಕನ್ನಡಿಗರು ಅವರಿಗೆ ಪಾಠ ಕಲಿಸಲಿದ್ದಾರೆ ಎಂದು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...