alex Certify
ಕನ್ನಡ ದುನಿಯಾ       Mobile App
       

Kannada Duniya

‘ಶೀಘ್ರವೇ ಪ್ರವಾಸಿ ಕೌಶಲ್ ಯೋಜನೆ ಜಾರಿ’

modi-matu

ಬೆಂಗಳೂರು: ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವತಿಯಿಂದ, ರಾಜ್ಯ ಸರ್ಕಾರದ ಸಹಯೋಗದಲ್ಲಿ ಆಯೋಜಿಸಿರುವ ಪ್ರವಾಸಿ ಭಾರತೀಯ ದಿವಸ್ ಗೆ ಅದ್ಧೂರಿ ಚಾಲನೆ ದೊರೆತಿದೆ.

ಭಾನುವಾರ ಕಾರ್ಯಕ್ರಮದಲ್ಲಿ ಮಾತತನಾಡಿದ ಪ್ರಧಾನಿ ನರೇಂದ್ರ ಮೋದಿ, ಸುಮಾರು 30 ಮಿಲಿಯನ್ ಭಾರತೀಯರು ವಿದೇಶಗಳಲ್ಲಿ ನೆಲೆಸಿದ್ದಾರೆ. ಅವರು ಇರುವ ದೇಶಗಳಿಂದಲೇ ಭಾರತಕ್ಕೆ ಕೊಡುಗೆ ನೀಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಭಾರತದ ಅಭಿವೃದ್ಧಿ ಪಥದಲ್ಲಿ ಅನಿವಾಸಿ ಭಾರತೀಯರು ಕೂಡ ಪಾಲುದಾರರಾಗಿದ್ದಾರೆ. ಭಾರತೀಯರು ಇರುವ ಜಾಗವೇ ಅವರ ಕರ್ಮ ಭೂಮಿಯಾಗಿದೆ ಎಂದು ತಿಳಿಸಿದ್ದಾರೆ.

ವಿಶ್ವದ ಎಲ್ಲಾ ದೇಶಗಳಲ್ಲಿಯೂ ಭಾರತೀಯ ತಮ್ಮ ಹೆಜ್ಜೆ ಗುರುತುಗಳನ್ನು ಮೂಡಿಸಿದ್ದಾರೆ. ಕೇಂದ್ರ ಸರ್ಕಾರ ಶೀಘ್ರವೇ ಪ್ರವಾಸಿ ಕೌಶಲ್ ಯೋಜನೆ ಜಾರಿಗೆ ತರಲಿದೆ. ವಿದೇಶಕ್ಕೆ ತೆರಳುವವರಿಗೆ ವಿಶೇಷ ತರಬೇತಿ ನೀಡಲಾಗುವುದು. ಹೋಗಲಿರುವ ದೇಶದ ಸಂಸ್ಕೃತಿ. ಅಲ್ಲಿ ಕೆಲಸ ಮಾಡಬೇಕಾದ ರೀತಿ ಬಗ್ಗೆ ತಿಳಿಸಲಾಗುವುದು ಎಂದು ಹೇಳಿದ್ದಾರೆ.

ಕಪ್ಪುಹಣದ ವಿರುದ್ಧ ಸಮರವೊಂದನ್ನು ಸಾರಿದ್ದೇವೆ. ಇದಕ್ಕೆ ಎಲ್ಲರೂ ಸಹಕಾರ ನೀಡಿದ್ದಾರೆ ಎಂದು ಮೋದಿ ಹೇಳಿದ್ದಾರೆ.

ಕಾರ್ಯಕ್ರಮದಲ್ಲಿ ರಾಜ್ಯಪಾಲ ವಜೂಭಾಯ್ ವಾಲಾ, ಮುಖ್ಯಮಂತ್ರಿ ಸಿದ್ಧರಾಮಯ್ಯ, ಕೇಂದ್ರ ಸಚಿವ ಅನಂತ್ ಕುಮಾರ್, ರಾಜ್ಯ ಸಚಿವ ದೇಶಪಾಂಡೆ ಮೊದಲಾದವರು ಭಾಗವಹಿಸಿದ್ದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...