alex Certify
ಕನ್ನಡ ದುನಿಯಾ       Mobile App
       

Kannada Duniya

ಅತ್ಯಾಚಾರಕ್ಕೊಳಗಾಗಿ ಗರ್ಭವತಿಯಾದ ಅಪ್ರಾಪ್ತ ಬಾಲಕಿ: ಆಘಾತಕ್ಕೆ ನೇಣಿಗೆ ಕೊರಳೊಡ್ಡಿದ ತಾಯಿ

ಬೆಳ್ತಂಗಡಿ: ತನ್ನ ಮುದ್ದಿನ ಮಗಳು ಅತ್ಯಾಚಾರಕ್ಕೊಳಗಾಗಿ ಗರ್ಭಿಣಿಯಾದ ವಿಷಯ ತಿಳಿದು ಜರ್ಜರಿತಗೊಂಡ ತಾಯಿ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿಯಲ್ಲಿ ನಡೆದಿದೆ.

ಇಲ್ಲಿನ ವೇಣೂರಿನ ನಿವಾಸಿ ನೇಣಿಗೆ ಕೊರಳೊಡ್ಡಿದ ಮಹಿಳೆ. 9 ನೇ ತರಗತಿ ಓದುತ್ತಿದ್ದ ಮಗಳು ಎರಡು ದಿನಗಳಿಂದ ಹೊಟ್ಟೆನೋವು ತಾಳಲಾರದೇ ಒದ್ದಾಡುತ್ತಿದ್ದಳು. ಮಗಳನ್ನು ಆಸ್ಪತ್ರೆಗೆ ಕರೆದೊಯ್ದಾಗ ಆಕೆ ಗರ್ಭವತಿ ಎಂಬ ವಿಷಯ ತಿಳಿದು ತಾಯಿ ಶಾಕ್ ಆಗಿದ್ದಾರೆ.

ಮಗಳನ್ನು ವಿಚಾರಿಸಿದಾಗ ತನ್ನ ಮೇಲೆ ಅತ್ಯಾಚಾರ ನಡೆದಿರುವ ಬಗ್ಗೆ ತಿಳಿಸಿದ್ದಾಳೆ. ಇದರಿಂದ ಆಘಾತಕ್ಕೊಳಗಾದ ತಾಯಿ ಮಾನ-ಮರ್ಯಾದೆಗೆ ಅಂಜಿ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ. ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪ್ರಾಪ್ತ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣ ಸಂಬಂಧ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...