alex Certify
ಕನ್ನಡ ದುನಿಯಾ       Mobile App
       

Kannada Duniya

ಗರ್ಭಿಣಿಯರು ಹಾಗೂ ಬಾಣಂತಿಯರಿಗೆ ಗುಡ್ ನ್ಯೂಸ್: ನ. 1ರಿಂದ ಮಾತೃಶ್ರೀ ಯೋಜನೆಗೆ ಚಾಲನೆ

ಗರ್ಭಿಣಿಯರು ಹಾಗೂ ಬಾಣಂತಿಯರಿಗೆ ಪ್ರೋತ್ಸಾಹ ಧನ ನೀಡುವ ಮಾತೃಶ್ರೀ ಯೋಜನೆಗೆ ನವಂಬರ್ ಒಂದರಿಂದ ಚಾಲನೆ ಸಿಗಲಿದೆ. ಯೋಜನೆಯಡಿ ಗರ್ಭಿಣಿಯರಿಗೆ ಮತ್ತು ಬಾಣಂತಿಯರಿಗೆ ಆರು ತಿಂಗಳು ಒಟ್ಟು ಆರು ಸಾವಿರ ರೂ. ಪ್ರೋತ್ಸಾಹ ಧನ ಸಿಗಲಿದೆ.

ಮಹಿಳಾ, ಮಕ್ಕಳ ಅಭಿವೃದ್ಧಿ ಸಚಿವೆ ಜಯಮಾಲಾ ಮಂಗಳವಾರದಂದು ವಿಕಾಸಸೌಧದಲ್ಲಿ ನಡೆದ ಪೌಷ್ಟಿಕ ಕರ್ನಾಟಕ ಕಾರ್ಯಕ್ರಮದ ವೇಳೆ ಈ ಮಾಹಿತಿ ನೀಡಿದ್ದು, ನವೆಂಬರ್ ಒಂದರ ಕರ್ನಾಟಕ ರಾಜ್ಯೋತ್ಸವ ದಿನದಂದೇ ಈ ಯೋಜನೆ ಅನುಷ್ಠಾನಕ್ಕೆ ಬರಲಿದೆ ಎಂದು ತಿಳಿಸಿದರು.

ಗರ್ಭಿಣಿಯರಿಗೆ ಮತ್ತು ಬಾಣಂತಿಯರಿಗೆ ಅಂಗನವಾಡಿಗಳಲ್ಲಿ ಬಿಸಿಯೂಟ ನೀಡುವ ಮಾತೃಪೂರ್ಣ ಯೋಜನೆ ಯಶಸ್ವಿಯಾಗಿ ನಡೆದಿದ್ದು, ಅಪೌಷ್ಟಿಕತೆ, ರಕ್ತಹೀನತೆ ಹಾಗೂ ಕಡಿಮೆ ತೂಕದ ಮಕ್ಕಳ ಜನನ ಸಮಸ್ಯೆ ನಿವಾರಿಸಲು ಹಲವು ಕಾರ್ಯಕ್ರಮ ರೂಪಿಸಲಾಗಿದೆ ಎಂದು ಜಯಮಾಲಾ ಹೇಳಿದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...