alex Certify
ಕನ್ನಡ ದುನಿಯಾ       Mobile App
       

Kannada Duniya

ಉಪರಾಷ್ಟ್ರಪತಿಯಾಗಿ ಡಿ.ಹೆಚ್. ಶಂಕರಮೂರ್ತಿ..?

dhs-dhs-d

ರಾಷ್ಟ್ರಪತಿಯಾಗಿ ಎನ್.ಡಿ.ಎ. ಬೆಂಬಲಿತ ಅಭ್ಯರ್ಥಿ ರಾಮನಾಥ್ ಕೋವಿಂದ್ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.

ಇದೇ ಸಂದರ್ಭದಲ್ಲಿ ಉಪ ರಾಷ್ಟ್ರಪತಿ ಆಯ್ಕೆಗೆ ಪ್ರಕ್ರಿಯೆಗಳು ಆರಂಭವಾಗಿವೆ. ಸೋಮವಾರ ಸಂಜೆ ಬಿ.ಜೆ.ಪಿ. ಸಂಸದೀಯ ಮಂಡಳಿ ಸಭೆ ನಡೆಯಲಿದ್ದು, ಉಪ ರಾಷ್ಟ್ರಪತಿ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಕುರಿತು ಚರ್ಚೆ ನಡೆಸಲಾಗುವುದು.

ಎನ್.ಡಿ.ಎ. ಮಿತ್ರ ಪಕ್ಷಗಳು ರಾಷ್ಟ್ರಪತಿ ಆಯ್ಕೆಯಲ್ಲಿ ಒಮ್ಮತದ ತೀರ್ಮಾನ ಕೈಗೊಂಡಂತೆಯೇ, ಉಪ ರಾಷ್ಟ್ರಪತಿ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುವುದು.

ಮೊದಲಿಗೆ ಬಿ.ಜೆ.ಪಿ. ಸಂಸದೀಯ ಸಮಿತಿ ಸಭೆಯಲ್ಲಿ ಅಭ್ಯರ್ಥಿಗಳನ್ನು ಫೈನಲ್ ಮಾಡಲಿದ್ದು, ಕೇಂದ್ರ ಸಚಿವ ವೆಂಕಯ್ಯನಾಯ್ಡು ಹಾಗೂ ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಡಿ.ಹೆಚ್. ಶಂಕರಮೂರ್ತಿ ಅವರ ಹೆಸರುಗಳು ಕೇಳಿ ಬರುತ್ತಿವೆ.

ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷಗಳು ಉಪ ರಾಷ್ಟ್ರಪತಿ ಹುದ್ದೆಗೆ ಮಹಾತ್ಮ ಗಾಂಧಿ ಮೊಮ್ಮಗ ಗೋಪಾಲಕೃಷ್ಣ ಗಾಂಧಿ ಅವರನ್ನು ಆಯ್ಕೆ ಮಾಡಿವೆ.

ಆಗಸ್ಟ್ 5 ರಂದು ಉಪ ರಾಷ್ಟ್ರಪತಿ ಚುನಾವಣೆ ನಡೆಯಲಿದ್ದು, ಇಂದು ಸಂಜೆ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುವುದು. ವೆಂಕಯ್ಯನಾಯ್ಡು ಕೇಂದ್ರ ಸಚಿವರಾಗಿ ಮುಂದುವರೆಯಲು ಆಸಕ್ತಿ ತೋರಿದ್ದು, ಶಂಕರಮೂರ್ತಿ ಅವರು ಅಭ್ಯರ್ಥಿಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಹಿಂದೆ ಶಂಕರಮೂರ್ತಿ ಅವರಿಗೆ ರಾಜ್ಯಪಾಲ ಹುದ್ದೆ ನೀಡಲಾಗುವುದು ಎಂದು ಹೇಳಲಾಗಿತ್ತಾದರೂ, ಅವರು ಸಭಾಪತಿಯಾಗಿ ಮುಂದುವರೆದಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...