alex Certify
ಕನ್ನಡ ದುನಿಯಾ       Mobile App
       

Kannada Duniya

ಶಾಲೆಯಲ್ಲಿ ಪಾಠ ಮಾಡುತ್ತಿದ್ದಾಗಲೇ ಪ್ರಾಂಶುಪಾಲರಿಗೆ ಚಾಕು ಇರಿತ

ಶಾಲೆಯಲ್ಲಿ ಪಾಠ ಮಾಡುತ್ತಿದ್ದ ಪ್ರಾಂಶುಪಾಲರನ್ನು ಐದು ಮಂದಿ ದುಷ್ಕರ್ಮಿಗಳ ಗುಂಪೊಂದು ವಿದ್ಯಾರ್ಥಿಗಳ ಎದುರೇ ಚಾಕುವಿನಿಂದ ಇರಿದು ಕೊಂದ ಘಟನೆ ಅಗ್ರಹಾರ ದಾಸರಹಳ್ಳಿಯ ಹಾವನೂರು ಪಬ್ಲಿಕ್ ಸ್ಕೂಲ್ ನಲ್ಲಿ ನಡೆದಿದೆ.

ಪ್ರಾಂಶುಪಾಲ ರಂಗನಾಥ 10ನೇ ತರಗತಿಯ ವಿದ್ಯಾರ್ಥಿಗಳಿಗೆ ವಿಶೇಷ ಕ್ಲಾಸ್ ತೆಗೆದುಕೊಂಡಿದ್ದರು. ಈ ಸಮಯದಲ್ಲಿ ತರಗತಿಯ ಒಳಗೆ ಬಂದ ದುಷ್ಕರ್ಮಿಗಳು ಏಳು ಬಾರಿ ಪ್ರಾಂಶುಪಾಲರಿಗೆ ಚಾಕುವಿನಿಂದ ಇರಿದಿದ್ದಾರೆ.

ಈ ದೃಶ್ಯ ನೋಡಿದ ವಿದ್ಯಾರ್ಥಿಗಳು ಬೆಚ್ಚಿಬಿದ್ದಿದ್ದಾರೆ. ಆಸ್ತಿ ಹಿನ್ನೆಲೆಯಲ್ಲಿ ಕೊಲೆ ನಡೆದಿದೆ ಎಂಬ ಸಂಶಯವೂ ವ್ಯಕ್ತವಾಗಿದೆ. ಶಾಲೆಯಲ್ಲಿ ವಿದ್ಯಾರ್ಥಿಗಳ ಕಿರುಚಾಟ ಕೇಳಿ ಸ್ಥಳೀಯರು ಸ್ಥಳಕ್ಕೆ ಬಂದಾಗ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಮಾಗಡಿ ರಸ್ತೆ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...