alex Certify
ಕನ್ನಡ ದುನಿಯಾ       Mobile App
       

Kannada Duniya

ಪ್ರಿಯಾಂಕ್ ಖರ್ಗೆ ಆಕ್ರೋಶ ಕಂಡು ಕಕ್ಕಾಬಿಕ್ಕಿಯಾದ ಸಿಎಂ

ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಬಡ್ತಿ ಮೀಸಲಾತಿ ವಿಚಾರ ಪ್ರಸ್ತಾಪಿಸಿ, ಆಕ್ರೋಶಭರಿತ ಮಾತುಗಳನ್ನಾಡಿದ್ದು, ಸಚಿವರ ಆವೇಶಕ್ಕೆ ಸಿಎಂ ಅವರೇ ಕೆಲಕಾಲ ಕಕ್ಕಾಬಿಕ್ಕಿಯಾದರೆಂದು ಹೇಳಲಾಗಿದೆ.

ಸಚಿವ ಸಂಪುಟ ಸಭೆಯಲ್ಲಿ ಬಡ್ತಿ ಮೀಸಲಾತಿ ಜಾರಿ ವಿಳಂಬದ ಬಗ್ಗೆ ಕಿಡಿಕಾರಿದ ಪ್ರಿಯಾಂಕ್ ಖರ್ಗೆ, ಬಡ್ತಿ ಮೀಸಲಾತಿ ಜಾರಿ ಈಗಾಗಲೇ ತುಂಬಾ ವಿಳಂಬವಾಗಿದೆ. ಈ ಬಗ್ಗೆ ಹಲವು ಬಾರಿ ಮನವಿ ಮಾಡಿದರೂ ಕೂಡ ನೀವು ಗಮನಕ್ಕೆ ತೆಗೆದುಕೊಂಡಿಲ್ಲ. ಇದು ಹೀಗೆಯೇ ಮುಂದುವರೆದರೆ ನಮ್ಮ ದಾರಿ ನಾವು ನೋಡಿಕೊಳ್ಳಬೇಕಾಗುತ್ತೆ ಎಂದು ಆವೇಶಭರಿತರಾಗಿ ಮಾತನಾಡಿದರೆನ್ನಲಾಗಿದೆ.

ಸಚಿವರ ಮಾತಿಗೆ ಸಿಎಂ ಕುಮಾರಸ್ವಾಮಿ ದಂಗಾಗಿ ನೋಡುತ್ತಿರಲು ಮಧ್ಯ ಪ್ರವೇಶ ಮಾಡಿದ ಉಪ ಮುಖ್ಯಮಂತ್ರಿ ಪರಮೇಶ್ವರ್, ಒಳ್ಳೆಯ ಉದ್ದೇಶದಿಂದ ಬಡ್ತಿ ಮೀಸಲಾತಿ ಮಸೂದೆ ತರಲಾಗಿದೆ. ಆದರೆ ಜಾರಿಗೆ ತರಲು ಸಾಧ್ಯವಾಗಿಲ್ಲ. ಈ ಬಗ್ಗೆ ಸಿಎಂ ಶೀಘ್ರವಾಗಿ ತೀರ್ಮಾನ ಕೈಗೊಳ್ಳಬೇಕು ಎಂದಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ, ಬಡ್ತಿ ಮೀಸಲಾತಿ ಮಸೂದೆಯನ್ನು ಜಾರಿಗೆ ತರುವ ನಿಟ್ಟಿನಲ್ಲಿ ಶೀಘ್ರವಾಗಿ ಪ್ರಯತ್ನ ಮಾಡೋಣವೆಂದು ಭರವಸೆ ನೀಡಿದರೆನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...