alex Certify
ಕನ್ನಡ ದುನಿಯಾ       Mobile App
       

Kannada Duniya

ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ: 8 ಮಂದಿ ಅರೆಸ್ಟ್

srir-lodge

ಮಂಡ್ಯ: ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಪೊಲೀಸ್ ಠಾಣೆ ವ್ಯಾಪ್ತಿಯ, ಲಾಡ್ಜ್ ವೊಂದರಲ್ಲಿ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ 8 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ರವಿ, ರಾಘವೇಂದ್ರ, ಆನಂದ್ ಹಾಗೂ ಲಾಡ್ಜ್ ಮ್ಯಾನೇಜರ್ ಸೇರಿದಂತೆ 8 ಮಂದಿಯನ್ನು ಬಂಧಿಸಿ, ಮೂವರು ಯುವತಿಯರನ್ನು ರಕ್ಷಿಸಲಾಗಿದೆ.

ಬಲಮುರಿ ಸಮೀಪದ ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವ ಬಗ್ಗೆ ಮಾಹಿತಿ ಕಲೆ ಹಾಕಿದ ಪೊಲೀಸರು, ಸಿ.ಪಿ.ಐ. ನೇತೃತ್ವದಲ್ಲಿ ದಾಳಿ ಮಾಡಿದ್ದಾರೆ.

ದಾಳಿಯ ಸಂದರ್ಭದಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವುದು ಕಂಡು ಬಂದಿದೆ. ಈ ಸಂಬಂಧ ಕೆ.ಆರ್.ಎಸ್. ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರರ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಗೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...