alex Certify
ಕನ್ನಡ ದುನಿಯಾ       Mobile App
       

Kannada Duniya

ಹೈಪ್ರೊಫೈಲ್ ವೇಶ್ಯಾವಾಟಿಕೆ ನಡೆಸುತ್ತಿದ್ದ 5 ಮಂದಿ ಅರೆಸ್ಟ್

massage-parlor

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ಈಗ ಮೊದಲಿನಂತಿಲ್ಲ. ವಿವಿಧ ಅಕ್ರಮ ಚಟುವಟಿಕೆಗಳು ಗರಿಗೆದರಿಕೊಂಡಿವೆ. ವೇಶ್ಯಾವಾಟಿಕೆ ದಂಧೆ ಸಿಲಿಕಾನ್ ಸಿಟಿಯಲ್ಲಿ ಹೆಚ್ಚಾಗುತ್ತಿದೆ. ಜನವಸತಿ ಪ್ರದೇಶದಲ್ಲಿಯೇ ಇಂತಹ ಕರಾಳದಂಧೆ ನಡೆಯುತ್ತಿವೆ ಎಂಬ ದೂರುಗಳು ಕೇಳಿಬರುತ್ತಿವೆ.

ಇದಕ್ಕೆ ಪೂರಕ ಎನ್ನುವಂತಹ ಪ್ರಕರಣ ಇಲ್ಲಿದೆ ನೋಡಿ. ಮಸಾಜ್ ಪಾರ್ಲರ್ ಹೆಸರಿನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಅಡ್ಡೆಯೊಂದರ ಮೇಲೆ ದಾಳಿ ನಡೆಸಿದ ಸಿಸಿಬಿ ಪೊಲೀಸರು 5 ಮಂದಿಯನ್ನು ಬಂಧಿಸಿದ್ದಾರೆ. ಅಲ್ಲದೇ, ಐವರು ಯುವತಿಯರನ್ನು ರಕ್ಷಿಸಿದ್ದಾರೆ. ಬೆಂಗಳೂರಿನ ವಿವಿಧ ಕಡೆಗಳಲ್ಲಿ ವಾಸವಾಗಿರುವ ಚಂದ್ರಕಾಂತ್, ಸಂಜೀವ್, ಲೂಯಿಸ್ ರಂಜಿತ್, ಅಭಿಷೇಕ್ ಸೇರಿದಂತೆ 5 ಮಂದಿಯನ್ನು ಬಂಧಿಸಲಾಗಿದೆ. ಲೂಯಿಸ್ ರಂಜಿತ್, ಪತ್ನಿಯೊಂದಿಗೆ ಸೇರಿ ಸದಾಶಿವ ನಗರದ ಬಡಾವಣೆಯೊಂದರಲ್ಲಿ ಮಸಾಜ್ ಪಾರ್ಲರ್ ನಡೆಸುತ್ತಿದ್ದ.

ಇಲ್ಲಿ ಮಸಾಜ್ ಪಾರ್ಲರ್ ಹೆಸರಿನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿರುವ ಕುರಿತಂತೆ ಪೊಲೀಸರು ಮಾಹಿತಿ ಕಲೆಹಾಕಿದ್ದಾರೆ. ಆರೋಪಿಗಳು ಥಾಯ್ಲೆಂಡ್ ಯುವತಿಯರನ್ನು ಬ್ಯೂಟಿ ಪಾರ್ಲರ್ ಕೆಲಸಕ್ಕೆಂದು ಕರೆದುಕೊಂಡು ಬರುತ್ತಿದ್ದರಲ್ಲದೇ, ಹೆಚ್ಚಿನ ಹಣದ ಆಮಿಷ ನೀಡಿ ಬಲವಂತವಾಗಿ ವೇಶ್ಯಾವಾಟಿಕೆ ಕೂಪಕ್ಕೆ ತಳ್ಳುತ್ತಿದ್ದರು ಎಂದು ಹೇಳಲಾಗಿದೆ. ಇದೀಗ ಐವರು ಯುವತಿಯರನ್ನು ರಕ್ಷಿಸಲಾಗಿದೆ. ಬಂಧಿತ ಆರೋಪಿಗಳಿಂದ ವಿವಿಧ ವಸ್ತು ವಶಕ್ಕೆ ಪಡೆಯಲಾಗಿದೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...