alex Certify
ಕನ್ನಡ ದುನಿಯಾ       Mobile App
       

Kannada Duniya

ನಟಿ ದೀಪಿಕಾ, ಕುಟುಂಬಕ್ಕೆ ರಕ್ಷಣೆ ನೀಡಲು ಸೂಚನೆ

ಖ್ಯಾತ ಬಾಲಿವುಡ್ ನಟಿ, ಕನ್ನಡತಿ ದೀಪಿಕಾ ಪಡುಕೋಣೆಯವರಿಗೆ ಬಹಿರಂಗ ಕೊಲೆ ಬೆದರಿಕೆ ಬಂದಿರುವ ಹಿನ್ನಲೆಯಲ್ಲಿ ದೀಪಿಕಾ ಪಡುಕೋಣೆ ಮತ್ತವರ ಕುಟುಂಬಕ್ಕೆ ಸೂಕ್ತ ರಕ್ಷಣೆ ನೀಡುವಂತೆ ಗೃಹ ಸಚಿವ ರಾಮಲಿಂಗಾರೆಡ್ಡಿ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಸಂಜಯ್ ಲೀಲಾ ಬನ್ಸಾಲಿಯವರ ‘ಪದ್ಮಾವತಿ’ ಚಿತ್ರದಲ್ಲಿ ನಟಿಸಿರುವ ದೀಪಿಕಾ ಪಡುಕೋಣೆ ಚಿತ್ರವನ್ನು ಸಮರ್ಥಿಸಿಕೊಂಡಿರುವುದಕ್ಕೆ ಹಲವು ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದ್ದು, ಸಂಜಯ್ ಲೀಲಾ ಬನ್ಸಾಲಿ ಹಾಗೂ ದೀಪಿಕಾ ಪಡುಕೋಣೆ ಹತ್ಯೆ ಮಾಡಿದವರಿಗೆ ಕೋಟಿಗಟ್ಟಲೆ ಬಹುಮಾನ ನೀಡುವುದಾಗಿ ಈಗಾಗಲೇ ಕೆಲವರು ಘೋಷಿಸಿದ್ದಾರೆ.

ಈ ಹಿನ್ನಲೆಯಲ್ಲಿ ದೀಪಿಕಾ ಪಡುಕೋಣೆ ಬೆಂಗಳೂರಿಗೆ ಆಗಮಿಸಿದ ವೇಳೆ ಹಾಗೂ ಬೆಂಗಳೂರಿನಲ್ಲಿ ವಾಸಿಸುತ್ತಿರುವ ಅವರ ಕುಟುಂಬಕ್ಕೆ ಸೂಕ್ತ ರಕ್ಷಣೆ ನೀಡುವಂತೆ ಗೃಹ ಸಚಿವರು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದಾರೆಂದು ತಿಳಿದುಬಂದಿದೆ.

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರರ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಗೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...