alex Certify
ಕನ್ನಡ ದುನಿಯಾ       Mobile App
       

Kannada Duniya

ಮೈಸೂರು, ಹಾಸನದಲ್ಲೂ ಪ್ರತಿಭಟನೆ

protestತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪನ್ನು ವಿರೋಧಿಸಿ ಇಂದು ಮಂಡ್ಯ ಬಂದ್ ನಡೆಯುತ್ತಿರುವ ಮಧ್ಯೆ ಮೈಸೂರು ಹಾಗೂ ಹಾಸನದಲ್ಲೂ ಪ್ರತಿಭಟನೆ ನಡೆದಿದೆ.

ಮಂಡ್ಯದಲ್ಲಿ ಪ್ರತಿಭಟನಾಕಾರರು ಸರ್ಕಾರಿ ಕಛೇರಿಗಳಿಗೆ ಮುತ್ತಿಗೆ ಹಾಕಿ, ರಸ್ತೆಯಲ್ಲಿ ಉರುಳು ಸೇವೆ ಮಾಡಿದ್ದರೆ, ಮೈಸೂರಿನಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಗೋಕುಲಂ ಬಡಾವಣೆಯಲ್ಲಿರುವ ಬಿಎಸ್ಎನ್ಎಲ್ ಮೊಬೈಲ್ ಟವರ್ ಏರಿ ಪ್ರತಿಭಟನೆ ನಡೆಸಿದ್ದಾರೆ.

ಖಾಲಿ ಕೊಡಪಾನಗಳೊಂದಿಗೆ ಮೊಬೈಲ್ ಟವರ್ ಏರಿದ ಪ್ರತಿಭಟನಾಕಾರರು ತಮಿಳುನಾಡು ವಿರುದ್ದ ಘೋಷಣೆ ಕೂಗಿದರಲ್ಲದೇ ನ್ಯಾಯ ಸಿಗುವವರೆಗೂ ಕೆಳಗಿಳಿಯುವುದಿಲ್ಲವೆಂದು ಪಟ್ಟು ಹಿಡಿದಿದ್ದು, ಪೊಲೀಸರು ಅವರ ಮನವೊಲಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ.

ಹಾಸನದಲ್ಲಿಯೂ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ರಸ್ತೆ ತಡೆ ನಡೆಸಿ ಪ್ರತಿಭಟಿಸಿದ್ದು, ಸುಪ್ರೀಂ ಕೋರ್ಟ್ ತೀರ್ಪಿಗೆ ಮಣಿದು ಒಂದು ವೇಳೆ ಸರ್ಕಾರ, ತಮಿಳುನಾಡಿಗೆ ನೀರು ಹರಿಸಿದರೆ ಪ್ರತಿಭಟನೆಯನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ಎಚ್ಚರಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...