alex Certify
ಕನ್ನಡ ದುನಿಯಾ       Mobile App
       

Kannada Duniya

ರಸಾಯನಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆ : 40 ಅಧಿಕಾರಿಗಳು ಮನೆಗೆ

1d156170-622c-4443-8082-04a2bc5a2c3f

ದ್ವಿತೀಯ ಪಿಯುಸಿ ರಸಾಯನಶಾಸ್ತ್ರ ಪ್ರಶ್ನೆ ಪತ್ರಿಕೆ ಎರಡನೇ ಬಾರಿಯೂ ಸೋರಿಕೆಯಾಗಿರುವುದರ ಕುರಿತಾಗಿ ಈಗಾಗಲೇ ಸಾಕಷ್ಟು ಆಕ್ರೋಶ ವ್ಯಕ್ತವಾಗುತ್ತಿರುವ ಬೆನ್ನಲ್ಲಿಯೇ ಪಿಯುಸಿ ಪರೀಕ್ಷಾ ವಿಭಾಗದ 40 ಅಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದ್ದು, ಆ ಮೂಲಕ ಸರ್ಕಾರ ಮುಜುಗರವನ್ನು ತಪ್ಪಿಸಿಕೊಳ್ಳುವ ಯತ್ನ ನಡೆಸಿದೆ.

ಹೌದು. ಪ್ರಶ್ನೆ ಪತ್ರಿಕೆ ಸೋರಿಕೆಯಾದ ಬೆನ್ನಲ್ಲಿ ಇಂದು ನಡೆಯಬೇಕಿದ್ದ ರಸಾಯನಶಾಸ್ತ್ರ ಮರು ಪರೀಕ್ಷೆಯನ್ನು ಮತ್ತೆ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಕಾರಣ ಮತ್ತೆ ಮುಂದೂಡಲಾಗಿದ್ದು ಇದರಿಂದ ವಿದ್ಯಾರ್ಥಿಗಳು ಪಿಯು ಬೋರ್ಡ್ ಎದುರು ಜಮಾಯಿಸಿ ಕಲ್ಲು ತೂರಾಟ ನಡೆಸಿ ಪ್ರತಿಭಟನೆ ನಡೆಸಿದರು. ಅಲ್ಲದೇ ಬಿಜೆಪಿ, ಜೆಡಿಎಸ್ ಸಹ ಘಟನೆಗೆ ಸಂಬಂಧಿಸಿದಂತೆ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿತು.

ಇದರ ಬೆನ್ನಲ್ಲಿಯೇ 40 ಅಧಿಕಾರಿಗಳನ್ನು ಶಿಕ್ಷಣ ಇಲಾಖೆ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದು, ಕೆಲ ಮಾಹಿತಿಗಳ ಪ್ರಕಾರ ಪಿಯು ಬೋರ್ಡ್ ನಿರ್ದೇಶಕಿ ಅವರನ್ನು ವರ್ಗಾವಣೆ ಮಾಡುವ ಸಾಧ್ಯತೆಯೂ ದಟ್ಟವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...