alex Certify
ಕನ್ನಡ ದುನಿಯಾ       Mobile App
       

Kannada Duniya

ದ್ವಿತೀಯ ಪಿಯು ಪರೀಕ್ಷೆ ಆರಂಭ

9ac12d74-2384-41fd-baef-d7a21762affe

ಇಂದಿನಿಂದ ದ್ವಿತೀಯ ಪಿಯು ಪರೀಕ್ಷೆ ಆರಂಭವಾಗಿದ್ದು ರಾಜ್ಯದ 1,032 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿರುವ ಈ ಪರೀಕ್ಷೆಯಲ್ಲಿ ಒಟ್ಟು 6,40,033 ವಿದ್ಯಾರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.
ಈ ಪರೀಕ್ಷೆಗೆ 3,28,187 ವಿದ್ಯಾರ್ಥಿಗಳು ಹಾಗೂ 3,10,846 ವಿದ್ಯಾರ್ಥಿನಿಯರು ಪರೀಕ್ಷೆಗೆ ಹಾಜರಾಗಲಿದ್ದು ಈಗಾಗಲೇ ಪರೀಕ್ಷಾ ಕೇಂದ್ರಗಳಿಗೆ ಪೊಲೀಸ್‌ ಬಂದೋಬಸ್ತ್‌ ಮಾಡಲಾಗಿದೆ. ಅಲ್ಲದೇ ಪರೀಕ್ಷಾ ಕೇಂದ್ರದ 200 ಮೀಟರ್‌ ಪ್ರದೇಶದ ವ್ಯಾಪ್ತಿಯನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ. ಇನ್ನು ನಗರ ಪ್ರದೇಶದಲ್ಲಿ 823 ಹಾಗೂ ಗ್ರಾಮೀಣ ಪ್ರದೇಶದಲ್ಲಿ 209 ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದ್ದು ಇದರಲ್ಲಿ 155 ಸೂಕ್ಷ್ಮ ಹಾಗೂ 51 ಅತಿ ಸೂಕ್ಷ್ಮ ಪರೀಕ್ಷಾ ಕೇಂದ್ರಗಳಾಗಿವೆ.

ವಿಶೇಷವೆಂದರೆ ಈ ಬಾರಿ ವಾಚ್‌ ಸೇರಿದಂತೆ ಎಲೆಕ್ಟ್ರಾನಿಕ್ಸ್‌ ಗಾಜೆಟ್ಸ್‌‌ಗಳನ್ನು ಪರೀಕ್ಷಾ ಕೊಠಡಿಗಳಿಗೆ ತರದಂತೆ ಕಟ್ಟು ನಿಟ್ಟಿನ ಸೂಚನೆ ನೀಡಲಾಗಿದ್ದು ಯಾವುದೇ ನಕಲು ನಡೆಯದಂತೆ ವಿಶೇಷ ತಂಡವೂ ಸಹ ಕಾರ್ಯ ನಿರ್ವಹಿಸಲಿದೆ ಎಂದು ಪರೀಕ್ಷಾ ಮಂಡಳಿ ತಿಳಿಸಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...