alex Certify
ಕನ್ನಡ ದುನಿಯಾ       Mobile App
       

Kannada Duniya

ಗುಡ್ ನ್ಯೂಸ್! ಸೆಕೆಂಡ್ PUC ಪರೀಕ್ಷೆ ಬರೆದವರಿಗೆ ಕೃಪಾಂಕ

ಬೆಂಗಳೂರು: ದ್ವಿತೀಯ ಪಿ.ಯು.ಸಿ. ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಇಲ್ಲಿದೆ. ಪ್ರಶ್ನೆ ಪತ್ರಿಕೆಯಲ್ಲಿ ದೋಷ ಕಂಡು ಬಂದ ಹಿನ್ನಲೆಯಲ್ಲಿ ಕೃಪಾಂಕ ನೀಡಲು ಪದವಿ ಪೂರ್ವ ಶಿಕ್ಷಣ ಇಲಾಖೆ ಮುಂದಾಗಿದೆ.

ಕೃಪಾಂಕ ನೀಡುವ ಕುರಿತಾಗಿ ವಿಷಯ ತಜ್ಞರಿಂದ ಸಲಹೆ ಪಡೆದು, ಸ್ವತಂತ್ರ ತಜ್ಞರ ಸಮಿತಿ ರಚಿಸಲು ತೀರ್ಮಾನಿಸಲಾಗಿತ್ತು. ಅದರಂತೆ ಇಂಗ್ಲಿಷ್ ಗೆ 3, ಭೌತಶಾಸ್ತ್ರಕ್ಕೆ 6 ಕೃಪಾಂಕ ನೀಡಲು ಸಮ್ಮತಿಸಲಾಗಿದೆ. ಇಂಗ್ಲಿಷ್ ಮತ್ತು ಭೌತಶಾಸ್ತ್ರ ಪರೀಕ್ಷೆಯ ಪ್ರಶ್ನೆಗಳು ತಪ್ಪು ಮುದ್ರಣವಾದ ಹಿನ್ನಲೆಯಲ್ಲಿ ಕೃಪಾಂಕ ನೀಡಲು ತೀರ್ಮಾನಿಸಲಾಗಿದೆ.

ದ್ವೀತಿಯ ಪಿ.ಯು.ಸಿ. ಪರೀಕ್ಷೆಯ ಪ್ರಶ್ನೆಪತ್ರಿಕೆಯಲ್ಲಿ ತಪ್ಪು ಕಂಡು ಬಂದಿವೆ ಎಂಬ ದೂರುಗಳ ಹಿನ್ನಲೆಯಲ್ಲಿ ಪಿ.ಯು. ಬೋರ್ಡ್ ಈ ಕುರಿತು ಕ್ರಮ ಕೈಗೊಂಡಿದೆ.

Subscribe Newsletter

Get latest updates on your inbox...

Opinion Poll

  • ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಪಡೆಯುತ್ತಾ ಬಿಜೆಪಿ...?

    View Results

    Loading ... Loading ...