alex Certify
ಕನ್ನಡ ದುನಿಯಾ       Mobile App
       

Kannada Duniya

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು, ಪೋಷಕರಿಗೆ ಇಲ್ಲಿದೆ ಮುಖ್ಯ ಮಾಹಿತಿ

ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಸಲಹೆ ಇಲ್ಲಿದೆ. ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟವೆಂದೇ ಹೇಳಲಾಗುವ ದ್ವಿತೀಯ ಪಿ.ಯು.ಸಿ. ಪರೀಕ್ಷೆ ಗುರುವಾರದಿಂದ ಆರಂಭವಾಗಿದೆ.

ಮೊದಲ ದಿನ ಭೌತಶಾಸ್ತ್ರ, ಅರ್ಥಶಾಸ್ತ್ರ ವಿಷಯದ ಪರೀಕ್ಷೆ ನಡೆದಿದೆ. ಪರೀಕ್ಷೆಗೆ ಅನೇಕ ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ. ಇನ್ನು ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳಲ್ಲಿ ಕೆಲವರು ಉತ್ತಮವಾಗಿ ಬರೆದರೆ, ಸರಿಯಾಗಿ ಪರೀಕ್ಷೆ ಬರೆಯಲು ಸಾಧ್ಯವಾಗದವರು ಒತ್ತಡಕ್ಕೆ ಒಳಗಾಗಿದ್ದಾರೆ.

ಒತ್ತಡಕ್ಕೆ ಒಳಗಾದರೆ ಮುಂದಿನ ಪರೀಕ್ಷೆಗಳಿಗೆ ತಯಾರಿ ನಡೆಸಲು ಸಮಸ್ಯೆಯಾಗುತ್ತದೆ. ಹಾಗಾಗಿ ಒತ್ತಡದಿಂದ ದೂರವಿದ್ದು, ಮುಂದಿನ ಪರೀಕ್ಷೆಗೆ ತಯಾರಿ ಮಾಡಿಕೊಳ್ಳಿ. ಪೋಷಕರು ಕೂಡ ಮಕ್ಕಳಿಗೆ ಒತ್ತಡವನ್ನು ಹೇರದೇ, ಅವರಿಗೆ ವಿಶ್ವಾಸದಿಂದ ಪರೀಕ್ಷೆಯನ್ನು ಎದುರಿಸಲು ತಿಳಿ ಹೇಳಿ. ಒಂದು ಪರೀಕ್ಷೆಯಲ್ಲಿ ಸರಿಯಾಗಿ ಬರೆಯದಿದ್ದ ಕಾರಣಕ್ಕೆ ಎಲ್ಲವೂ ಅಲ್ಲಿಗೆ ಮುಗಿಯುವುದಿಲ್ಲ. ಮುಂದಿನ ಪರೀಕ್ಷೆಗಳನ್ನು ಸಮರ್ಥವಾಗಿ ಎದುರಿಸಿ ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸುವ ವಿಶ್ವಾಸವನ್ನು ತುಂಬಿರಿ.

ಒತ್ತಡಕ್ಕೆ ಒಳಗಾದರೆ, ಯಶಸ್ಸಿಗಿಂತ ಹಿನ್ನಡೆಯೇ ಜಾಸ್ತಿಯಾಗುತ್ತದೆ. ಸುಲಭದ ಪ್ರಶ್ನೆಗಳಿದ್ದರೂ, ಉತ್ತರಿಸಲು ಕಷ್ಟವೆನಿಸಬಹುದು. ಹಾಗಾಗಿ ಸಮಾಧಾನದಿಂದ ಎಲ್ಲಾ ಪ್ರಶ್ನೆಗಳನ್ನು ಓದಿ ಮನನ ಮಾಡಿಕೊಂಡು ಉತ್ತರಿಸಲು ಪ್ರಯತ್ನಿಸಿ. ಪರೀಕ್ಷೆ ಎಂದರೆ, ವಿದ್ಯಾರ್ಥಿಗಳಿಗೆ ಮಾತ್ರವಲ್ಲ, ಪೋಷಕರಿಗೂ ಕೂಡ. ಮಕ್ಕಳ ಮೇಲೆ ಒತ್ತಡ ಹೇರದೇ ದೃಢ ವಿಶ್ವಾಸದಿಂದ ಪರೀಕ್ಷೆಯನ್ನು ಬರೆಯಲು ಸಲಹೆ ನೀಡಿರಿ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...