alex Certify
ಕನ್ನಡ ದುನಿಯಾ       Mobile App
       

Kannada Duniya

ಪ್ರತಿಭಟನೆಗೆ ಮಣಿದು ಬೇಡಿಕೆ ಈಡೇರಿಸಿದ ಸರ್ಕಾರ

teachers-protest

ವೇತನ ತಾರತಮ್ಯ ಸರಿಪಡಿಸುವಂತೆ ಒತ್ತಾಯಿಸಿ ಮೌಲ್ಯಮಾಪನ ಬಹಿಷ್ಕರಿಸಿರುವ ಪಿಯು ಉಪನ್ಯಾಸಕರ ವೇತನ ಮತ್ತು ಭತ್ಯೆಯನ್ನು ಶೇ.30 ರಷ್ಟು ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದ್ದು, ಆ ಮೂಲಕ ಪಿಯು ಉಪನ್ಯಾಸಕರ ಬಹು ದಿನದ ಬೇಡಿಕೆ ಈಡೇರಿದಂತಾಗಿದೆ.

ಹೌದು. ವೇತನ ತಾರತಮ್ಯ ಸರಿಪಡಿಸುವಂತೆ ಒತ್ತಾಯಿಸಿ ಸರ್ಕಾರಿ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರು ಮತ್ತು ಪ್ರಾಂಶುಪಾಲರು ಫ್ರೀಡಂ ಪಾರ್ಕ್‌ ನಲ್ಲಿ ಧರಣಿ ಸತ್ಯಾಗ್ರಹ ನಡೆಸುತ್ತಿದ್ದು ಮಾತ್ರವಲ್ಲ, ಪಿಯು ಮೌಲ್ಯಮಾಪನವನ್ನು ಬಹಿಷ್ಕರಿಸುವುದಾಗಿ ಬೆದರಿಕೆ ಹಾಕಿದ್ದರು.

ಈ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಳೆದ ಶುಕ್ರವಾರ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಪಿಯು ಉಪನ್ಯಾಸಕರ ಸಂಘದ ಪದಾಧಿಕಾರಿಗಳೊಂದಿಗೆ ಸಂಧಾನ ಸಭೆ ನಡೆಸಿದ್ದರೂ ಸಹ ಯಾವುದೇ ಪ್ರಯೋಜನವಾಗಿರಲಿಲ್ಲ. ಅಂತಿಮವಾಗಿ ಉಪನ್ಯಾಸಕರ ಬೇಡಿಕೆಗೆ ಮಣಿದ ಸರ್ಕಾರ ಉಪನ್ಯಾಸಕರ ದಿನಭತ್ಯೆ ಮತ್ತು ವೇತನವನ್ನು ಶೇ.30 ರಷ್ಟು ಹೆಚ್ಚಿಸಿದೆ. ಆದರೆ ಮೌಲ್ಯ ಮಾಪನದಲ್ಲಿ ಪಾಲ್ಗೊಳ್ಳುವವರಿಗೆ ಮಾತ್ರ ಇದು ಅನ್ವಯವಾಗುತ್ತದೆ ಎಂದು ಆದೇಶದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ಆಯುಕ್ತ ರಾಮೇಗೌಡ ಅವರು ಸ್ಪಷ್ಟಪಡಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...